ತಿರಂಗಾ ನಮ್ಮ ಹೆಮ್ಮೆ, ಸ್ವಾತಂತ್ರ್ಯ ನಮ್ಮ ಉಸಿಉ್ಪ್ಮ- ಡಾ. ಅಜಿತ್ ಪ್ರಸಾದ್
ಲೋಕದರ್ಶನ ವರದಿ
ಧಾರವಾಡ 14: “ತಿರಂಗಾ ನಮ್ಮ ಹೆಮ್ಮೆ, ಸ್ವಾತಂತ್ರ್ಯ ನಮ್ಮ ಉಸಿರು. ರಾಷ್ಟ್ರಧ್ವಜದ ಗೌರವ ಕಾಪಾಡುವುದು ಪ್ರತಿಯೊಬ್ಬ ಭಾರತೀಯನ ಜವಾಬ್ದಾರಿ” ಎಂದು ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಡಾ. ಅಜಿತ್ ಪ್ರಸಾದ್ ಹೇಳಿದರು. ನಗರದ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ಆಯೋಜಿಸಿದ್ದ ‘ತಿರಂಗಾ ಧ್ವಜ ವಿನ್ಯಾಸ ಪ್ರದರ್ಶನ’ ಉದ್ಘಾಟಿಸಿ ಅವರು ಮಾತನಾಡಿದರು.
ರಾಷ್ಟ್ರಧ್ವಜದ ಕೇಸರಿ, ಬಿಳಿ ಹಾಗೂ ಹಸಿರು ಬಣ್ಣಗಳು ಧೈರ್ಯ, ಶಾಂತಿ, ಸಮೃದ್ಧಿ ಹಾಗೂ ಅಭಿವೃದ್ಧಿಯ ಸಂಕೇತಗಳಾಗಿವೆ. ಧ್ವಜದ ಅಶೋಕಚಕ್ರವು ನಿರಂತರ ಪ್ರಗತಿಯ ಸಂದೇಶ ನೀಡುತ್ತದೆ ಎಂದು ಅವರು ವಿವರಿಸಿದರು.
ಆಡಳಿತಾಧಿಕಾರಿ ಅರಿಹಂತ ಪ್ರಸಾದ್ ಮಾತನಾಡಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಹಾಗೂ ರಾಷ್ಟ್ರಾಭಿಮಾನ ಬೆಳೆಸಲು ಸಹಕಾರಿಯಾಗುತ್ತವೆ ಎಂದರು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಮತ್ತು ರಾಷ್ಟ್ರಧ್ವಜದ ಮಹತ್ವವನ್ನು ಯುವಜನತೆ ಅರಿತುಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪಪ್ರಾಚಾರ್ಯ ಡಾ. ಸೂರಜ್ ಜೈನ್, ಶ್ರೀ ಮಹಾವೀರ ಉಪಾಧ್ಯೆ ಸೇರಿದಂತೆ ಬೋಧಕ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.