ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವಿಜಯನಗರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಎರಡು ದಿನಗಳ ಕಾಲ ಸ್ಪರ್ಧೆಗಳನ್ನು ಏರಿ್ಡಸಿದ್ದು ವ್ಯಾಪಕ ಪ್ರಚಾರವನ್ನು ನೀಡುವ ಬಗ್ಗೆ ಮನವಿ.
ಲೋಕದರ್ಶನ ವರದಿ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವಿಜಯನಗರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಎರಡು ದಿನಗಳ ಕಾಲ ಸ್ಪರ್ಧೆಗಳನ್ನು ಏರಿ್ಡಸಿದ್ದು ವ್ಯಾಪಕ ಪ್ರಚಾರವನ್ನು ನೀಡುವ ಬಗ್ಗೆ ಮನವಿ.
ಹೊಸಪೇಟೆ, ವಿಜಯನಗರ 03: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ರಾಜ್ಯ ಸರಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಜಿಲ್ಲಾ ಕ್ರೀಡಾಂಗಣದಲ್ಲಿ ದಿನಾಂಕ : 09 ಮತ್ತು 10 ಫೆಬ್ರವರಿ 2026 ಎರಡು ದಿನಗಳ ಕಾಲ ಆಚರಿಸಲಾಗುವುದು ಎಂದು ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಜಿ.ಮಲ್ಲಿಕಾರ್ಜುನಗೌಡ ತಿಳಿಸಿದ್ದಾರೆ.
ಜಿಲ್ಲಾ ಮಟ್ಟದ ಸರಕಾರಿ ನೌಕರರು ಕ್ರೀಡಾಕೂಟದಲ್ಲಿ ವೈಯಕ್ತಿಕ ಸ್ಪರ್ಧೆಗಳು ಹಾಗೂ ಗುಂಪು ಸ್ಪರ್ಧೆಗಳಲ್ಲಿ ಭಾಗವಹಿಸಬಹುದಾಗಿದೆ. ಗುಂಪು ಆಟದಲ್ಲಿ ಪ್ರಥಮ ಸ್ಥಾನ ಪಡೆದವರು ಹಾಗೂ ವೈಯಕ್ತಿಕ ಆಟದಲ್ಲಿ ಪ್ರಥಮ ದ್ವಿತೀಯ ಸ್ಥಾನ ಪಡೆದವರು ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಬಹುದಾಗಿದೆ. 06-ತಾಲೂಕುಗಳಿಂದ ವಿವಿಧ ಇಲಾಖೆಯ ನೌಕರರು 1800 ಕ್ರೀಡಾಪಟುಗಳು ಈ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸುವ ನೀರೀಕ್ಷೆಯಿದೆ.
ಕ್ರೀಡಾಕೂಟದಲ್ಲಿ ಭಾಗವಹಿಸಲು ಇಚ್ಚಿಸುವ ನೌಕರರು ದಿನಾಂಕ : 09.02.2026 ಸಮಯ : ಬೆಳಿಗ್ಗೆ 9.30ಕ್ಕೆ ವಿಜಯನಗರ ಜಿಲ್ಲಾ ಕ್ರೀಡಾಂಗಣದಲ್ಲಿ ನೊಂದಾಯಿಸಿಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.