ಮಂಗಳೂರಿನಲ್ಲಿ ಲಾಕ್ಡೌನ್ ಟೀಕಿಸಿ ಸಂದೇಶ ಕಳುಹಿಸಿದ್ದ ಒಬ್ಬನ ಬಂಧನ
ಮಂಗಳೂರು, ಏಪ್ರಿಲ್ 1,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರೋನವೈರಸ್ ಸೋಂಕು ತಡೆಗಟ್ಟುವಲ್ಲಿ ತೊಡಗಿರುವ ರಾಜ್ಯ ಸರ್ಕಾರಿ ಸಿಬ್ಬಂದಿ ವಿರುದ್ಧ ದುರುದ್ದೇಶಪೂರಿತ ಆರೋಪಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.'ಇದು ನಮ್ಮ ಧ್ವನಿ’ ಎಂಬ ವೇದಿಕೆ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ದುರುದ್ದೇಶಪೂರಿತ ವಿಷಯವನ್ನು ಹರಡಿದ ಆರೋಪದ ಮೇಲೆ ನಿಜಾಮ್ ಎಂಬುವವನ್ನು ಬಂಧಿಸಲಾಗಿದ್ದು, ಈತನನ್ನು ನ್ಯಾಯಾಲಯದ ಆದೇಶದ ಮೇರೆಗೆ ನ್ಯಾಯಾಂಗ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಹರ್ಷ ತಿಳಿಸಿದ್ದಾರೆ. ಆರೋಪಿ ಕೊವಿದ್ -19 ಸೋಂಕು ಹರಡುವಿಕೆ ತಡೆಯುವಿಕೆ ಕೆಲಸದಲ್ಲಿ ತೊಡಗಿರುವ ವಿವಿಧ ಸರ್ಕಾರಿ ಕಾರ್ಯಕರ್ತರ ಕಾರ್ಯದ ಬಗ್ಗೆ ಟೀಕಿಸಿ, ವದಂತಿಗಳನ್ನು ಹರಡಿದ್ದಾನೆ ಎಂದು ಅವರು ಮಂಗಳವಾರ ಟ್ವೀಟ್ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 