ಗಂಧದ ಮರದ ತುಂಡು ಮಾರಾಟ ಮಾಡುತ್ತಿದ್ದವನ ಬಂಧನ
ಬೆಂಗಳೂರು, ಜ 30 ಗಂಧದ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿ, 6 ಕೆಜಿ ತೂಕದ ತುಂಡನ್ನು ವಶಪಡಿಸಿಕೊಂಡಿದ್ದಾರೆ. ರಾಮನಗರ ಮೂಲದ ಅರ್. ಸಿ. ಜಯಣ್ಣ (37) ಬಂಧಿತ ಆರೋಪಿ. ನಗರದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಪಾಳ್ಯ ಲ್ಲಿರುವ ವಿವಿಎಸ್ ಇಂಟರ್ ನ್ಯಾಷನಲ್ ಸ್ಕೂಲ್ ಪಕ್ಕದ ಮನೆಯೊಂದರಲ್ಲಿ ಗಂಧದ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಬುಧವಾರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 6 ಕೆಜಿ ತೂಕದ ಹಾಗೂ ಸುಮಾರು 37 ಸೆಂ.ಮೀ ಉದ್ದದ ಮರದ ತುಂಡನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹರೀಶ್ ಎಂಬಾತ ತಲೆ ಮರೆಸಿಕೊಂಡಿದ್ದಾನೆ. ಆರೋಪಿಗಳಾದ ಜಯಣ್ಣ ಹಾಗೂ ಹರೀಶ್, ಅಧಿಕ ಹಣ ಗಳಿಸಿ ಜೀವನ ಸಾಗಿಸಲು ಈ ವ್ಯವಹಾರಕ್ಕೆ ಕೈ ಹಾಕಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 