ರೌಡಿಶೀಟರ್ ಹತ್ಯೆಗೈದವರಿಬ್ಬರ ಬಂಧನ
ಬೆಂಗಳೂರು, ಏ. 27, ಹಣಕ್ಕಾಗಿ ರೌಡಿಶೀಟರ್ ಓರ್ವನನ್ನು ಕೊಲೆ ಮಾಡಿದ ಇಬ್ಬರು ಆರೋಪಿಗಳನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.ರಾಜನಕುಂಟೆಯ ಲೋಕೇಶ್‍ರೆಡ್ಡಿ ಅಲಿಯಾಸ್ ಅವೀರ್(39) ಮತ್ತು ಯಲಹಂಕದ ಸಿಂಗನಾಯಕನಹಳ್ಳಿಯ ನಿಖಿಲ್(25) ಬಂಧಿತ ಆರೋಪಿಗಳು.ಕಳೆದ ಏ.21ರಂದು ಮಧ್ಯಾಹ್ನ ರೌಡಿ ಪ್ರಕಾಶ್ ಅಲಿಯಾಸ್ ಕ್ವಾಟೆ(34) ಎಂಬಾತನನ್ನು ಸುರದೇನಪುರದಿಂದ ಸಿಲ್ವರ್ ಕಾರಿನಲ್ಲಿ ಅಪಹರಿಸಿದ ದುಷ್ಕರ್ಮಿಗಳು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿ ಶವವನ್ನು ಮತ್ಕೂರು ಗ್ರಾಮದ ಬಳಿ ಬಿಸಾಡಿ ಪರಾರಿಯಾಗಿದ್ದರು.
ಈ ಸಂಬಂಧ ಮೃತನ ಪತ್ನಿ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ ಸೋಲದೇನವಹಳ್ಳಿ ಪೊಲೀಸರು ಖಚಿತವಾದ ಮಾಹಿತಿ ಆಧರಿಸಿ ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳು ವಿಚಾರಣೆಯಲ್ಲಿ, ಮೃತ ಪ್ರಕಾಶ ರಾಜಾನುಕುಂಟೆ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿದ್ದು, ಈತನು ಇಸ್ಪೀಟ್ ಆಟದಲ್ಲಿ ಮೋಸ ಮಾಡುವುದು, ಕುಡಿಯುವುದಕ್ಕೆ ಮದ್ಯ ಕೊಡಿಸುವುದಿಲ್ಲವೆಂದು ತಮಗೆ ಅವಾಚ್ಯ ಶಬ್ದಗಳಿಂದ ಬೈಯ್ಯುತ್ತಿದ್ದನು. ಅದಕ್ಕಾಗಿ ಕೊಲೆ ಮಾಡಿರುವುದಾಗಿ ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ಶ್ರೇಯಸ್‍ನ ಪತ್ತೆ ಕಾರ್ಯ ಪ್ರಗತಿಯಲ್ಲಿದೆ. ಯಶವಂತಪುರ ಉಪವಿಭಾಗದ ಎಸಿಪಿ, ಎನ್.ಟಿ.ಶ್ರೀನಿವಾಸ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಸೋಲದೇವನಹಳ್ಳಿ ಠಾಣೆಯ ಪೊಲೀಸ್ ಇನ್‍ಸ್ಪೆಕ್ಟರ್ ಸಿ.ಬಿ.ಶಿವಸ್ವಾಮಿ ಹಾಗೂ ಸಿಬ್ಬಂದಿಯವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 