ನಟಿ ರಿಯಾ ಚಕ್ರವರ್ತಿ ಜಾಮೀನು ಅರ್ಜಿ ವಜಾ
ಮುಂಬೈ, ಸೆಪ್ಟೆಂಬರ್ 11: ಬಾಲಿವುಡ್ ಡ್ರಗ್ ಮಾಫಿಯಾ ಪ್ರಕರಣದಲ್ಲಿ ನಟಿ ಎನ್ ಸಿಬಿಯಿಂದ ಬಂಧಿತರಾಗಿರುವ ರಿಯಾ ಚಕ್ರವರ್ತಿ, ಆಕೆಯ ಸೋದರ ಸೇರಿದಂತೆ 6 ಮಂದಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ.
ಮುಂಬೈನ ಸೆಷನ್ಸ್ ನ್ಯಾಯಾಲಯವು ಈ ಆದೇಶ ನೀಡಿದ್ದು, ಇದೇ 22ರ ವರೆಗೆ 6 ಮಂದಿಗೂ ಜೈಲೇ ಗತಿಯಾಗಿದೆ.
ಡ್ರಗ್ ಪ್ರಕರಣಕ್ಕೆ ಸಂಬಂಧಿಸಿ ನಟಿ ರಿಯಾ, ಆಕೆಯ ಸೋದರ ಶೋಯಿಕ್ ಸೇರಿದಂತೆ 6 ಮಂದಿಯನ್ನು ಬಂಧಿಸಲಾಗಿತ್ತು.
ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಂದು ಆರೋಪಿಸಿ, ಸುಶಾಂತ್ ಸಿಂಗ್ ತಂದೆ ಕೆ.ಕೆ. ಸಿಂಗ್, ಜುಲೈ 25ರಂದು ಪಾಟ್ನಾ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಈ ತಿಂಗಳ 22 ರ ವರೆಗೆ ನ್ಯಾಯಾಂಗ ಬಂಧನದಲ್ಲಿ ವಿಚಾರಣೆ ಎದುರಿಸುವಂತೆ ಸ್ಥಳೀಯ ನ್ಯಾಯಾಲಯ ಆದೇಶಿಸಿತ್ತು.