ಬಳ್ಳಾರಿ

ಬಾಲಕ ಕಾಣೆ; ಪತ್ತೆಗೆ ಮನವಿ

ಬಾಲಕ ಕಾಣೆ; ಪತ್ತೆಗೆ ಮನವಿ

ಬಳ್ಳಾರಿ,ಅ.26: ಸಂಡೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಸಿದ್ದಾಪುರ ಗ್ರಾಮದ ನಿವಾಸಿ ಮಹಮ್ಮದ್ ಅಲಿಖಾನ್ ಎನ್ನುವ 16 ವರ್ಷದ ಬಾಲಕ ಸೆ.06ರಂದು ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಅವರು ತಿಳಿಸಿದ್ದಾರೆ. 

ಬಾಲಕನ ಚಹರೆ ಗುರುತು: ಎತ್ತರ 5.3 ಅಡಿ, ಸಾಧಾರಣ ಮೈಕಟ್ಟು, ಕೋಲುಮುಖ, ಗೋಧಿ ಮೈಬಣ್ಣ ಹೊಂದಿದ್ದು, ಬಿಳಿ ಅಂಗಿ ಮತ್ತು ಕಪ್ಪು ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ಹಿಂದಿ ಮತ್ತು ಉರ್ದು ಭಾಷೆ ಮಾತನಾಡುತ್ತಾನೆ.  

ಬಾಲಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಸಂಡೂರು ಪೊಲೀಸ್ ಠಾಣೆಯ ದೂ.08395-260249, ಪಿ.ಎಸ್‌.ಐ ಮೊ.9480803061 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ