ಚಾಮುಂಡಿ ಬೆಟ್ಟದಲ್ಲಿ ನಾಡಅಧಿದೇವತೆಯ ವಿಜೃಂಭಣೆಯ ರಥೋತ್ಸವ
ಮೈಸೂರು, ಅ 13: ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡಿ ದೇವಿಯ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಭಾನುವಾರ ಬೆಳಗ್ಗೆ 6.30 ರಿಂದ 7.15ರ ಶುಭ ಮುಹೂರ್ತದಲ್ಲಿ ರಥೋತ್ಸವ ನೆರವೇರಿತು.
ರಥೋತ್ಸವವನ್ನು ಕಣ್ತುಂಬಿಕೊಳ್ಳಲು ಭಾರಿ ಸಂಖ್ಯೆಯ ಭಕ್ತಾದಿಗಳು ಮುಂಜಾನೆಯೇ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರು
ಸಂಪ್ರದಾಯದಂತೆ ರಾಜವಂಶಸ್ಥ ಯದುವೀರ ಕೃಷ್ಣ ದತ್ತ ಒಡೆಯರ್ ಪೂಜೆ ಸಲ್ಲಿಸಿದ ಬಳಿಕ ಚಾಮುಂಡಿ ದೇವಿಯ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಸಾವಿರಾರು ಮಂದಿ ಭಕ್ತಾದಿಗಳು ರಥೋತ್ಸವದಲ್ಲಿ ಭಾಗಿಯಾಗಿದ್ದರು. ರಥ ಎಳೆದು ದೇವಿಯ ದರ್ಶನ ಪಡೆದು ಪುನೀತರಾದರು.
ರಾಜವಂಶಸ್ಥೆ ಪ್ರಮೋದಾದೇವಿ, ಯದುವೀರ್ ಒಡೆಯರ್ ಪತ್ನಿ ತ್ರಿಷಿಕಾ ಕುಮಾರಿ ಒಡೆಯರ್ ಚಾಮುಂಡೇಶ್ವರಿ ದರ್ಶನ ಪಡೆದರು.
ಅಕ್ಟೋಬರ್ 15 ರಂದು ಸಂಜೆ 6.30ಕ್ಕೆ ದೇವಿಕೆರೆಯಲ್ಲಿ ತೆಪ್ಪೊತ್ಸವ ನಡೆಯಲಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 