ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಪ್ರಗತಿ ಸಾಧ್ಯ : ಬಸವರಾಜ ಶಿವಣ್ಣನವರ
ಬ್ಯಾಡಗಿ 22 : ಗ್ರಾಮೀಣ ಭಾಗದಲ್ಲಿ ರಸ್ತೆಗಳ ಅಭಿವೃದ್ದಿ, ದೇವಸ್ಥಾನಗಳ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕ್ಷೇತ್ರದ ಸಂಪೂರ್ಣ ಅಭಿವೃದ್ದಿಯೇ ನನ್ನ ಬದ್ಧತೆ. ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಪ್ರಗತಿ ಸಾಧ್ಯ’ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ತಾಲ್ಲೂಕಿನ ಬನ್ನಿಹಟ್ಟಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರಾಮ ಗುಂಡೆನಹಳ್ಳಿ ಗ್ರಾಮದಲ್ಲಿ ಮಾನ್ಯ ಮುಖ್ಯಮಂತ್ರಿ ಮೂಲ ಸೌಕರ್ಯ ಯೋಜನೆಯಡಿ ಬ್ಯಾಡಗಿ ರಸ್ತೆಯಿಂದ ಬೀರನಗೌಡ ಪಾಟೀಲ ಇವರ ಮನೆಯಿಂದ ಬೈಲ ಬಸವೆಶ್ವರ ದೇವಸ್ಥಾನದ ವರೆಗೆ ಮೆಟಲಿಂಗ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಮತ್ತು ದುರ್ಗಾದೇವಿ ದೇವಸ್ಥಾನ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಬಳಿಕ ಅವರು ಮಾತನಾಡಿದರು. ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಡಿ 25 ಲಕ್ಷ ರೂಪಾಯಿ ವೆಚ್ಚದಲ್ಲಿ ದೇವಸ್ಥಾನ ನಿರ್ಮಾಣ ಹಾಗೂ ರಸ್ತೆ ಅಭಿವೃದ್ಧಿ ಗೆ ಮಾನ್ಯ ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಅಡಿ 30 ಲಕ್ಷ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ನಿಡಲಾಗಿದ್ದು ಮೊದಲ ಹಂತದಲ್ಲಿ ದೇವಸ್ಥಾನಕ್ಕೆ 15 ಬಿಡುಗಡೆ ಮಾಡಿದೆ ಇನ್ನೂ 10,ಲಕ್ಷ ಬಿಡುಗಡೆ ಮಾಡಲಾಗುವುದು. ಎಲ್ಲ ಕಾಮಗಾರಿಗಳು ನಿಗದಿತ ಸಮಯದಲ್ಲಿ ಮುಗಿಯಬೇಕು ಕಾಮಗಾರಿ ಗುಣಮಟ್ಟದ್ದಾಗಿರಬೇಕು ಮತ್ತು ತಾಲೂಕಿನಲ್ಲಿರುವ ಪ್ರತಿಯೊಂದು ಗ್ರಾಮಗಳ ಅಭಿವೃದ್ಧಿ ಮಾಡುವುದೇ ನಮ್ಮ ಗುರಿ ಎಂದರು.
ಈ ವೇಳೆ ಉಮೇಶ್ ಕರಿಗಾರ್ ಮಾತನಾಡಿ ದೇವಸ್ಥಾನದ ಅಭಿವೃದ್ಧಿಗಾಗಿ ನನ್ನ ಸ್ವಂತ ಹಣದಲ್ಲಿ 10 ಲಕ್ಷ ರೂಪಾಯಿಯನ್ನು ಹಂತ ಹಂತವಾಗಿ ನೀಡುತ್ತೇನೆ ಎಂದರು ಮತ್ತು ಈಗಾಗಲೇ ಜಿಲ್ಲೆಯಲ್ಲಿ ಹಲವಾರು ನೂರಾರು ದೇವಸ್ಥಾನಗಳಿಗೆ ಅನುದಾನವನ್ನು ನನ್ನ ದುಡಿಮೆಯಿಂದಲೇ ನೀಡಲಾಗಿದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ತಾಲೂಕು ಅಧ್ಯಕ್ಷ ದಾನಪ್ಪ ಚೂರಿ. ಚನ್ನಬಸಪ್ಪ ಹುಲ್ಲತ್ತಿ. ಚಿಕ್ಕಪ್ಪ ಹಾದಿಮನಿ. ಡಿ ಎಚ್ ಬುದ್ದನಗೌಡ. ಗುತ್ತಿಗೆದಾರದ ನಾಗರಾಜ. ಶಿವರಾಜ್. ಹಾಗೂ ಗ್ರಾಮದ ಎಲ್ಲ ಹಿರಿಯರು ಗ್ರಾಮಸ್ಥರು ಉಪಸ್ಥಿತರಿದ್ದರು.