ವಿಜಯಪುರ

ಕಿತ್ತೂರು ಚೆನ್ನಮ್ಮಳ ಧೈರ್ಯ, ಶೌರ್ಯ ಮಹಿಳೆಯರಿಗೆ ಸ್ಫೂರ್ತಿಯಾಗಬೇಕು

ಕಿತ್ತೂರು ಚೆನ್ನಮ್ಮಳ ಧೈರ್ಯ, ಶೌರ್ಯ ಮಹಿಳೆಯರಿಗೆ ಸ್ಫೂರ್ತಿಯಾಗಬೇಕು

ವಿಜಯಪುರ 23: ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಧೈರ್ಯ, ಶೌರ್ಯ, ದೇಶಪ್ರೇಮ ಹಾಗೂ ಆಡಳಿತ ವೈಖರಿಯನ್ನು ಇಂದಿನ ಮಹಿಳೆಯರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಹೇಳಿದರು. 

ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಂತ ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಜೀವನ ಸಾಧನೆಗಳು ಹಾಗೂ ಹೋರಾಟದ ಬದುಕನ್ನು ಯುವ ಪೀಳಿಗೆ ಅರಿತುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಕಿತ್ತೂರು ರಾಣಿ ಚೆನ್ನಮ್ಮ ಅವರು ತಮ್ಮ ನಾಡಿನ ನೆಲ,ಜಲ ಹಾಗೂ ಸ್ವಾಭಿಮಾನಕ್ಕಾಗಿ ದಿಟ್ಟತನದಿಂದ ಹೋರಾಡಿದ ವೀರ ಮಹಿಳೆ.. ಪಾಲಿಕೆ ಸದಸ್ಯ ಪ್ರೇಮಾನಂದ ಬಿರಾದಾರ ಹಾಗೂ ಸಮಾಜದ ಮುಖಂಡ ಬಿ.ಎಂ. ಪಾಟೀಲ ಅವರು ಮಾತನಾಡಿದರು.  ಉಪನ್ಯಾಸ ನೀಡಿದ ಶರಣಗೌಡ ಪಾಟೀಲ ಅವರು ಮಾತನಾಡಿ, ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಕೊಡುಗೆ ಸ್ಮರಣೀಯವಾಗಿದೆ. ತಮ್ಮ ಕಾಲದಲ್ಲಿಯೇ ಯುದ್ಧತಂತ್ರಗಳನ್ನು ಕರಗತ ಮಾಡಿಕೊಂಡು, ಶತ್ರುಗಳ ವಿರುದ್ಧ ಧೈರ್ಯದಿಂದ ಹೋರಾಡಿದ ಅವರು ಅಪ್ರತಿಮ ವೀರ ಮಹಿಳೆಯಾಗಿದ್ದಾರೆ. ಅವರ ತ್ಯಾಗ, ಸಾಹಸ ಹಾಗೂ ಅಪ್ಪಟ ದೇಶಪ್ರೇಮದ ಕಿಚ್ಚನ್ನು ಮಕ್ಕಳಲ್ಲಿ ಬೆಳೆಸಬೇಕು. ಕಿತ್ತೂರು ರಾಣಿ ಚೆನ್ನಮ್ಮ ಅವರ ಜೀವನಾನುಭವಗಳು ಮತ್ತು ಆದರ್ಶಗಳನ್ನು ಯುವ ಪೀಳಿಗೆ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.  ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯೆ ಭಾರತಿ ಕಣಮುಚನಾಳ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ, ಪಾಲಿಕೆಯ ಉಪ ಆಯುಕ್ತ ಮಹಾವೀರ ಬೋರಣ್ಣನವರ, ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ್ ಭೋವಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ಆಯುಷ್ ಅಧಿಕಾರಿ ಡಾ. ವಿದ್ಯಾವತಿ ಅಥಣಿ, ಗೀರೀಶ ಕುಲಕರ್ಣಿ, ವಿ.ಸಿ. ನಾಗಠಾಣ, ಬಿ.ಎಂ. ಬಿರಾದಾರ ಹಾಗೂ ದಾನೇಶ ಅವಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಮತ್ತು ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ