ಯುದ್ಧದಲ್ಲಿ 3,000 ಸೈನಿಕರ ಸಾವು, ಕನಿಷ್ಟ 10,000 ಜನರಿಗೆ ಗಾಯ: ಉಕ್ರೇನಿಯನ್ ಅಧ್ಯಕ್ಷ
ಕೈವ್: ಏಪ್ರಿಲ್ 16 : ರಷ್ಯಾದೊಂದಿಗಿನ ಯುದ್ಧದಲ್ಲಿ ಇದುವರೆಗೆ 3,000 ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 10,000 ಜನರು ಗಾಯಗೊಂಡಿದ್ದಾರೆ ಎಂದು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸಾವು ನೋವನ್ನು ಬಹಿರಂಗಪಡಿಸಿದ್ದಾರೆ. ಆದರೆ ಎಷ್ಟು ಮಂದಿ ಬದುಕುಳಿಯುತ್ತಾರೆ ಎಂದು ಹೇಳುವುದು ಕಷ್ಟ ಎಂದು ಹೇಳಿದ್ದಾರೆ.
ಉಕ್ರೇನಿಯನ್ ರಾಜಧಾನಿಯ ಸುತ್ತಮುತ್ತಲಿನ ಪ್ರದೇಶದಲ್ಲಿ 900ಕ್ಕೂ ಹೆಚ್ಚು ನಾಗರಿಕರ ಶವಗಳು ಪತ್ತೆಯಾಗಿವೆ. ಅವರಲ್ಲಿ ಹೆಚ್ಚಿನವರು ಮಾರಣಾಂತಿಕವಾಗಿ ಗುಂಡಿನ ದಾಳಿಯಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ಹೇಳಿದ್ದಾರೆ.
ಯುದ್ಧ ಆರಂಭವಾಗಿ ಎಂಟನೇ ವಾರವಾಗಿದ್ದು, ಇದುವರೆಗೆ ಯುದ್ಧದಲ್ಲಿ 19,000 ರಿಂದ 20,000 ರಷ್ಯಾದ ಸೈನಿಕರು ಕೊಲ್ಲಲ್ಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ. ಆದರೆ ಮಾಸ್ಕೋ ಕಳೆದ ತಿಂಗಳು 1,351 ರಷ್ಯಾದ ಸೈನಿಕರು ಕೊಲ್ಲಲ್ಪಟ್ಟರು ಮತ್ತು 3,825 ಮಂದಿ ಗಾಯಗೊಂಡಿದ್ದಾರೆ ಎಂದು ಘೋಷಿಸಿತು ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.