ಕೊರೊನಾ ಮಹಾಮಾರಿಯಿಂದ ಡೊನಾಲ್ಡ್ ಟ್ರಂಪ್ ಆಪ್ತ ಸ್ನೇಹಿತ ಸಾವು
ನ್ಯೂಯಾರ್ಕ್,
ಏ ೧೩,ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸ್ನೇಹಿತ ಸ್ಟಾನ್ಲಿ
ಚೇರಾ (೭೮) ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸ್ಟಾನ್ಲಿ ಚೇರಾ
ನ್ಯೂಯಾರ್ಕ್ ಸಿಟಿ ರಿಯಲ್ ಎಸ್ಟೇಟ್ ಡೆವಲಪರ್ ಆಗಿ ಹೆಸರುವಾಸಿಯಾಗಿದ್ದರು.
ಟ್ರಂಪ್ ಅವರ ರಿಪಬ್ಲಿಕನ್ ಪಕ್ಷಕ್ಕೂ ಸ್ಟಾನ್ಲಿ ಭಾರಿ ಪ್ರಮಾಣದಲ್ಲಿ ದೇಣಿಗೆ
ನೀಡಿದ್ದರು. ಅವರು ಕ್ರೌನ್ ಅಕ್ವಿಸಿಷನ್ಸ್ ಹೆಸರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ
ನಡೆಸುತ್ತಿದ್ದರು. ನ್ಯೂಯಾರ್ಕ್ ನಗರದಲ್ಲಿ ಈ ಸಂಸ್ಥೆ ಹಲವು ಬೃಹತ್ ಕಟ್ಟಡಗಳನ್ನು
ನಿರ್ಮಿಸಿದೆ.ಅಮೆರಿಕಾ ಅಧ್ಯಕ್ಷೀಯ ಚುನಾವಣೆ ಸಂದರ್ಭದಲ್ಲಿ ಡೊನಾಲ್ಡ್ ಟ್ರಂಪ್
ಅವರ ಪ್ರಚಾರಕ್ಕೆ ಸ್ಟಾನ್ಲಿ ಸುಮಾರು ೪ ಲಕ್ಷ ಡಾಲರ್ ದೇಣಿಗೆ ನೀಡಿದ್ದರು.
ಟ್ರಂಪ್ ಅಳಿಯ ಜೇರೆಡ್ ಕುಶ್ನರ್ ಅವರೊಂದಿಗೆ ಸ್ಟಾನ್ಲಿ ವ್ಯವಹಾರ ಸಂಬಂಧಗಳನ್ನು
ಹೊಂದಿದ್ದರು. ಕಳೆದ ವರ್ಷ ನ್ಯೂಯಾರ್ಕ್‌ನಲ್ಲಿ ನಡೆದ ಹಿರಿಯರ ದಿನಾಚರಣೆಯಲ್ಲಿ
ಪಾಲ್ಗೊಂಡಿದ್ದ ಅಧ್ಯಕ್ಷ ಡೋನಾಲ್ಡ್ ಟ್ರಂಪ್, ಸ್ಟಾನ್ಲಿ ತನ್ನ ಅತ್ಯುತ್ತಮ
ಸ್ನೇಹಿತ ಎಂದು ಹೇಳಿಕೊಂಡಿದ್ದರು. ಅಲ್ಲದೆ, ಇತ್ತೀಚೆಗೆ ನಡೆದ ಮಾಧ್ಯಮ ಗೋಷ್ಟಿಯಲ್ಲಿ
ತನ್ನ ಸ್ನೇಹಿತ ಸ್ಟಾನ್ಲಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎಂದು ಟ್ರಂಪ್
ಹೇಳಿದ್ದರು.
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 