ಆಕ್ರಮಣಕಾರಿಯಾಗಿ ಕೊಹ್ಲಿಯನ್ನು ಎದುರಿಸಿ ಇಂಗ್ಲೆಂಡ್ಗೆ ಮಾಜಿ ನಾಯಕನ ಸಲಹೆ
ಬಮರ್ಿಂಗ್ಹ್ಯಾಮ್ 30: ಆಕ್ರಮಣಕಾರಿ ಆಟದ ಮೂಲಕ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯನ್ನು ಎದುರಿಸಿ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕೆಲ್ ವಾಘನ್ ತಂಡದ ಆಟಗಾರರಿಗೆ ಸಲಹೆ ನೀಡಿದ್ದಾರೆ. ಆಗಸ್ಟ್ 1ರಿಂದ ಟೀಂ ಇಂಡಿಯಾದ ಹಾಗೂ ಇಂಗ್ಲೆಂಡ್ ನಡುವೆ ಐತಿಹಾಸಿಕ ಟೆಸ್ಟ್ ಸರಣಿ ನಡೆಯಲಿದ್ದು ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾವನ್ನು ಎದುರಿಸಬೇಕಾದರೆ ನೀವು(ಇಂಗ್ಲೆಂಡ್ ಆಟಗಾರರಿಗೆ) ಆಕ್ರಮಣಕಾರಿ ಆಟ ಪ್ರದಶರ್ಿಸುವ ಮೂಲಕ ಸವಾಲಾಗಬೇಕಿದೆ ಎಂದು ಹೇಳಿದ್ದಾರೆ. ಇಂಗ್ಲೆಂಡ್ ತಂಡದ ಖ್ಯಾತ ಆಟಗಾರ ಅಲಿಸ್ಟರ್ ಕುಕ್ ರೀತಿಯ ಸ್ಥಿರ ಪ್ರದರ್ಶನವನ್ನು ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ತೋರಬೇಕಿದೆ. ಇನ್ನು ಟೀಂ ಇಂಡಿಯಾ ಆಟಗಾರರಿಗೆ ಸವಾಲಾಗಲು ಸ್ಟುವಟರ್್ ಬ್ರಾಡ್ ಮತ್ತು ಜೇಮ್ಸ್ ಆ್ಯಂಡ್ರೂಸನ್ ವೇಗಿಗಳನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಮೊದಲ ಪಂದ್ಯ ಆಗಸ್ಟ್ 1ರಿಂದ ಪ್ರಾರಂಭವಾಗಲಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 