ಹೂವಿನ ಹಡಗಲಿ

ಅಕ್ರಮ ವಲಸಿಗರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಸರ್ಕಾರ ಮುಂದಾಗಿದೆ

ಅಕ್ರಮ ವಲಸಿಗರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಸರ್ಕಾರ ಮುಂದಾಗಿದೆ

ಹೂವಿನಹಡಗಲಿ  12:  ರಾಜ್ಯ ಸರ್ಕಾರವು ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ಕುರಿತು ಹೊರಡಿಸಿರುವ ಅಧಿಸೂಚನೆ ಅಕ್ರಮ ವಲಸಿಗರಿಗೆ ರಕ್ಷಣೆ ನೀಡುವ ಪ್ರಯತ್ನವಾಗಿದೆ ಎಂದು ಶಾಸಕ ಕೃಷ್ಣ ನಾಯ್ಕ್‌ ಆರೋಪಿಸಿದರು.  ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವಿಶೇಷ ಪರೀಶೀಲನೆ (ಎಸ್‌ಐಆರ್) ಮೂಲಕ ಮತದಾರರ ಪಟ್ಟಿಯ ಸಮಗ್ರ ಪರೀಶೀಲನೆ ನಡೆಯುತ್ತಿರುವ ಸಂದರ್ಭದಲ್ಲಿ, ಸರ್ಕಾರ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ಕ್ರಮ ಕೈಗೊಂಡಿರುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಟೀಕಿಸಿದರು.  

ಅಕ್ರಮ ವಲಸಿಗರಿಗೆ ಪಿಆರ್ಸಿ ನೀಡುವುದರಿಂದ ರಾಜ್ಯ ಹಾಗೂ ರಾಷ್ಟ್ರದ ಭದ್ರತೆಗೆ ಧಕ್ಕೆ ಉಂಟಾಗುವ ಸಾಧ್ಯತೆಯಿದೆ. ಈ ವಿಷಯದಲ್ಲಿ ಕೇಂದ್ರ ಗೃಹ ಸಚಿವಾಲಯ ಮಧ್ಯಪ್ರವೇಶಿಸಿ ದೇಶದ ಆಂತರಿಕ ಭದ್ರತೆಯನ್ನು ಕಾಪಾಡಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.  ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್‌. ಸಂಜೀವ ರೆಡ್ಡಿ, ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರ್, ಜಿಲ್ಲಾ ಉಪಾಧ್ಯಕ್ಷ ಇಟಿ. ಲಿಂಗರಾಜ್, ಹಣ್ಣಿ ಶಶಿಧರ್, ಮಂಜುನಾಥ್ ಜೈನ್, ಎಚ್‌. ಪೂಜಪ್ಪ, ಸಿ. ಮೋಹನ್ ರೆಡ್ಡಿ, ಟಿ. ಮಹಾಂತೇಶ್, ಕೊಡಿಹಳ್ಳಿ ಕೊಟ್ರೇಶ್, ವಾರದ ಗೌಸ್ ಮೊಹಿದ್ದೀನ್ ಹಾಗೂ ಪುನೀತ್ ದೊಡ್ಡಮನಿ ಉಪಸ್ಥಿತರಿದ್ದರು. 


ಸುದ್ದಿ ಓದಿ