ಬ್ಯಾಡ್ಗಿ

ಸಮಾನತೆಯ ಹರಿಕಾರ ಬಸವಣ್ಣನವರ ವಿಚಾರಗಳು ಸಾರ್ವಕಾಲಿಕವಾಗಿವೆ. ರಾಜ್ಯ ಗ್ಯಾರಂಟಿ ಅಧ್ಯಕ್ಷ ಎಸ್ ಆರ್ ಪಾಟೀಲ

ಸಮಾನತೆಯ ಹರಿಕಾರ ಬಸವಣ್ಣನವರ ವಿಚಾರಗಳು ಸಾರ್ವಕಾಲಿಕವಾಗಿವೆ. ರಾಜ್ಯ ಗ್ಯಾರಂಟಿ ಅಧ್ಯಕ್ಷ ಎಸ್ ಆರ್ ಪಾಟೀಲ

ಬ್ಯಾಡಗಿ 21 : ಬಸವಣ್ಣನವರು. ಸಮಾಜದಲ್ಲಿ ಅನ್ಯಾಯ ವಿರುದ್ಧ ಹೋರಾಟ ಮಾಡಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನತೆ ಇದೆಯೆಂದು ಪ್ರತಿಪಾದಿಸಿದ್ದರು. ಆದರೆ, ಸಮಾಜದಲ್ಲಿ ಅಸಮಾನತೆ ಮುಂದುವರಿದಿದೆ. ಎಲ್ಲರೂ ಒಂದಾಗಿ ಅಸಮಾನತೆಯನ್ನು ಹೋಗಲಾಡಿಸಬೇಕಿದೆ’ ಎಂದು ತಿಳಿಸಿದರು.ಪಟ್ಟಣದ ಶ್ರೀ ಬಸವೇಶ್ವರ ವೃತ್ತದಲ್ಲಿ ಇರುವ ಶ್ರೀ ಬಸವೇಶ್ವರ ಮೂರ್ತಿಗೆ ಮಾಲಾರೆ​‍್ಣ ಮಾಡುವ ಮೂಲಕ ಮಾತನಾಡಿದವರು‘ನಾವು ಬಸವಣ್ಣನವರ ತತ್ವ ಹಾಗೂ ಆದರ್ಶಗಳನ್ನು ಮೊದಲು ಅಚ್ಚುಕಟ್ಟಾಗಿ ಪಾಲಿಸಬೇಕಿದೆ. ಅಂದಾಗ ಮಾತ್ರ ನಮ್ಮ ಬದುಕಿಗೆ ಅರ್ಥ ಸಿಗುತ್ತದೆ’ ಎಂದು ಹೇಳಿದರು. ಪುರಸಭೆಯ ಮಾಜಿ ಅಧ್ಯಕ್ಷ ಮುಖಂಡ ಮುರಿಗೆಪ್ಪ ಶೆಟ್ಟರ್ ಮಾತನಾಡಿ, ‘ಬಸವಣ್ಣನವರು 12ನೇ ಶತಮಾನದಲ್ಲಿ ವಚನಗಳ ಮೂಲಕ ಅಸ್ಪೃಶ್ಯತೆಯನ್ನು ಹೋಗಲಾಡಿಸಲಿಕ್ಕೆ ಹೋರಾಟ ಮಾಡಿದರು’ ಎಂದು ಹೇಳಿದರು.

ತಹಶೀಲ್ದಾರ್ ಶಿವಶಂಕರ ನಾಯಕ್ ಮಾತನಾಡಿ‘ಪ್ರಸ್ತುತ ಸಮಾಜದಲ್ಲಿ ಧರ್ಮಗಳ ನಡುವೆ ಅಶಾಂತಿ ಸೃಷ್ಟಿಯಾಗುತ್ತಿದೆ. ದಯವೇ ಧರ್ಮದ ಮೂಲವಯ್ಯ ಎಂಬ ಬಸವಣ್ಣನವರ ತತ್ವ ಪಾಲಿಸಿದರೆ ಸಾಮರಸ್ಯ ಮೂಡುತ್ತದೆ’ ಎಂದು ತಿಳಿಸಿದರು.ಪುರಸಭೆ ಮುಖ್ಯ ಅಧಿಕಾರಿ ವಿನಯ್ ಕುಮಾರ ಹೊಳೆಯಪ್ಪ ಗೋಳ ಮಾತನಾಡಿ‘ಬಸವಣ್ಣನವರ ಸಂದೇಶ ವನ್ನು ನೆನಪು ಮಾಡಿಕೊಳ್ಳಬೇಕು. ಯುವ ಪೀಳಿಗೆಗೆ ತಿಳಿಸುವಂತಹ ಕೆಲಸ ಮಾಡಬೇಕು. ಸಂವಿಧಾನದ ಮುನ್ನಡೆ ನೋಡಿದಾಗ ಬಸವಣ್ಣನವರು ನೆನಪಿಗೆ ಬರುತ್ತಾರೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಗುಡ್ಡಪ್ಪ ಆಡಿನವರ್‌. ಶಶಿಧರ ಗೊಲ್ಲರಹಳ್ಳಿ ಮಠ. ಮಜೀದ್ ಮುಲ್ಲಾ. ಶಿವಯೋಗಿ ಗಡಾದ. ಗೀರೀಶ್ ಇಂಡಿಮಠ ಹಾಗೂ ಅನೇಕರು ಉಪಸ್ಥಿತರಿದ್ದರು. 


ಸುದ್ದಿ ಓದಿ