‘ಲವ್ ಯೂ ರಚ್ಚು’ ಚಿತ್ರೀಕರಣದಲ್ಲಿ ಅವಘಡ : 3 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರು, ಆಗಸ್ಟ್ 10 : ನಿರ್ದೇಶಕ ಗುರು ದೇಶಪಾಂಡೆ ನಿರ್ಮಾಣದ ‘ಲವ್ ಯೂ ರಚ್ಚು’ ಚಿತ್ರೀಕರಣದ ಸಂದರ್ಭದಲ್ಲಿ ನಡೆದ ಅವಘಡದಲ್ಲಿ ಫೈಟರ್ ವಿವೇಕ್ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ, ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ರಾಮನಗರ ಹೆಚ್ಚುವರಿ ಸಿವಿಲ್ ಕೋರ್ಟ್ ನ್ಯಾಯಾಧೀಶರು ಮೂವರು ಆರೋಪಿಗಳಾದ ನಿರ್ದೇಶಕ ಶಂಕರಯ್ಯ, ಪೈಟ್ ಮಾಸ್ಟರ್ ವಿನೋದ್ ಕುಮಾರ್, ಕ್ರೇನ್ ಚಾಲಕನಿಗೆ ಆಗಸ್ಟ್ 24ರ ವರೆಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ.
ಕಳೆದ 5 ರಾಮನಗರದ ಜೋಗನಪಾಳ್ಯದಲ್ಲಿ ‘ಲವ್ ಯೂ ರಚ್ಚು’ ಚಿತ್ರೀಕರಣ ನಡೆಯುತ್ತಿತ್ತು. ಸೋಮವಾರದ ಚಿತ್ರೀಕರಣದ ಸಂದರ್ಭದಲ್ಲಿ ಬಳಸುತ್ತಿದ್ದ ಮೆಟಲ್ ರೋಪ್, ಹೈಟೆನ್ಷನ್ ವಯರ್ ಗೆ ತಗುಲಿ, ಫೈಟರ್ ವಿವೇಕ್ ಹಾಗೂ ರಂಜಿತ್ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದರು.
ಕೂಡಲೃ ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವಿವೇಕ್ (35) ಕೊನೆಯುಸಿರೆಳೆದಿರುವುದಾಗಿ ವೈದ್ಯರು ಘೋಷಿಸಿದ್ದರು.