ಕೇಂದ್ರ ಬಜೆಟ್‌ನಲ್ಲಿ ತೆರಿಗೆ ಪಾಲಿನಲ್ಲಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ
The injustice being done to Karnataka in terms of tax share in the central budget
ಬ್ಯಾಡಗಿ 02: ಕೇಂದ್ರ ಬಜೆಟ್‌ನಲ್ಲಿ ತೆರಿಗೆ ಪಾಲಿನಲ್ಲಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವ ಯಾವುದೇ ಇಚ್ಛಾಶಕ್ತಿಯನ್ನು ಕೇಂದ್ರ ಸರ್ಕಾರ ತೋರಿಲ್ಲ. ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಮತ್ತು ಬರ ಪರಿಹಾರಕ್ಕೆ ವಿಶೇಷ ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರ ಮತ್ತೊಮ್ಮೆ ವಿಫಲವಾಗಿದೆ. ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದು ಹೇಳುತ್ತಲೇ ಬಂದಿರುವ ಕೇಂದ್ರ ಸರ್ಕಾರ, ಈ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಯಾವುದೇ ಹೊಸ ಉತ್ತೇಜನಕಾರಿ ಯೋಜನೆಗಳನ್ನು ಘೋಷಿಸಿಲ್ಲ. ರಸಗೊಬ್ಬರ ಮತ್ತು ಕೃಷಿ ಉಪಕರಣಗಳ ಮೇಲಿನ ಜಿಎಸ್‌ಟಿ ಇಳಿಕೆ ಮಾಡುವ ಬಗ್ಗೆ ಚಕಾರ ಎತ್ತಿಲ್ಲ. ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ, ಬೆಲೆ ಏರಿಕೆಯಿಂದ ತತ್ತರಿಸಿದ ಗೃಹಿಣಿಯರಿಗೆ ಮತ್ತು ಸಂಕಷ್ಟದಲ್ಲಿರುವ ರೈತರಿಗೆ ಈ ಬಜೆಟ್‌ನಲ್ಲಿ ಸಿಕ್ಕಿದ್ದು ಬರೀ ಚೊಂಬು.- ಬಸವರಾಜ ಶಿವಣ್ಣನವರ, ಶಾಸಕರು ಬ್ಯಾಡಗಿ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 