ಉತ್ತರ ಸಿನಾಯ್ ಪ್ರಾಂತ್ಯದಲ್ಲಿ ಈಜಿಪ್ಟ್ ಸೇನೆಯಿಂದ 10 ಭಯೋತ್ಪಾದಕರ ಹತ್ಯೆ
ಕೈರೋ, ಫೆ 10, ಉತ್ತರ ಸಿನಾಯ್ ಪ್ರಾಂತ್ಯದ ಮಿಲಿಟರಿ ಚೆಕ್ ಪೋಸ್ಟ್ ಮೇಲೆ ಪ್ರಬಲ ದಾಳಿ ನಡೆಸಲು ಸಂಚು ರೂಪಿಸಿದ್ದ 10 ಭಯೋತ್ಪಾದಕರನ್ನು ಹತ್ಯೆ ಮಾಡಿರುವುದಾಗಿ ಈಜಿಪ್ಟ್ ಸೇನೆ ಘೋಷಿಸಿದೆ. ಉತ್ತರ ಸಿನಾಯ್ ನಲ್ಲಿರುವ ಭದ್ರತಾ ಚೆಕ್ ಪೋಸ್ಟ್ ಮೇಲೆ ಭಾನುವಾರ ನಡೆಸಲು ಉದ್ದೇಶಿಸಲಾಗಿದ್ದ ಭಯೋತ್ಪಾದಕ ದಾಳಿಯನ್ನು ಸೇನಾ ಪಡೆ ಹತ್ತಿಕಿದೆ ಎಂದು ಸೇನಾಪಡೆ ವಕ್ತಾರರ ಹೇಳಿಕೆ ತಿಳಿಸಿದೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಅಧಿಕಾರಿಗಳು ಸೇರಿದಂತೆ ಏಳು ಸಿಬ್ಬಂದಿಗೆ ಗಾಯಗಳಾಗಿವೆ. ಭಯೋತ್ಪಾದಕರು ಬಳಸಿದ ನಾಲ್ಕು ಚಕ್ರದ ವಾಹನವನ್ನೂ ನಾಶಪಡಿಸಲಾಗಿದ್ದು ದಾಳಿಯ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಸೇನಾ ಪಡೆ ಈ ಕಾರ್ಯಾಚರಣೆ ನಡೆಸಿತು ಎಂದು ಹೇಳಿಕೆ ತಿಳಿಸಿದೆ. ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ನಿಷ್ಠರಾಗಿರುವ ಸಿನಾಯ್ ಮೂಲದ ಭಯೋತ್ಪಾದಕರ ಗುಂಪು ಈಜಿಪ್ಟ್ ನಲ್ಲಿ ಬಹುತೇಕ ದಾಳಿಗಳ ಹೊಣೆ ಹೊತ್ತುಕೊಂಡಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 