ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸಮಾಜಕ್ಕೆ ಸದಾ ದಾರೀದೀಪವಾಗಿವೆ - ತಹಶೀಲ್ದಾರ್ ರಾಘವೇಂದ್ರ ರಾವ್
ಶಿರಹಟ್ಟಿ 26 : ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ತಹಶೀಲ್ದಾರ್, ಸಮಾಜದ ಮುಖಂಡರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸೇರಿಕೊಂಡು ಮಹರ್ಷಿ ವಾಲ್ಮೀಕಿಯವರ ಮೂರ್ತಿಗೆ ಮಾಲಾರೆ್ಣ ಮಾಡುವ ಮೂಲಕ ಗೌರವಪೂರ್ವಕವಾಗಿ ಆಚರಿಸಿದರು.
ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿಯವರ ಮೂರ್ತಿಗೆ ಪುಷ್ಪಮಾಲೆ ಅರ್ಿಸಿ ಗೌರವ ಸಲ್ಲಿಸಲಾಯಿತು. ಬಳಿಕ ಮಾತನಾಡಿದ ತಹಶೀಲ್ದಾರ್ ರಾಘವೇಂದ್ರ ರಾವ್ ಅವರು, ಮಹರ್ಷಿ ವಾಲ್ಮೀಕಿಯವರು ಭಾರತೀಯ ಸಾಹಿತ್ಯ ಲೋಕಕ್ಕೆ ಅಮೂಲ್ಯ ಕೊಡುಗೆ ನೀಡಿದ ಮಹಾನ್ ಋಷಿಗಳಾಗಿದ್ದಾರೆ.
ರಾಮಾಯಣ ಮಹಾಕಾವ್ಯವನ್ನು ರಚಿಸುವ ಮೂಲಕ ಸತ್ಯ, ಧರ್ಮ, ನ್ಯಾಯ ಹಾಗೂ ಮಾನವೀಯ ಮೌಲ್ಯಗಳ ಮಹತ್ವವನ್ನು ಜಗತ್ತಿಗೆ ಸಾರಿದ್ದಾರೆ ಎಂದು ತಿಳಿಸಿದರು. ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸಮಾಜಕ್ಕೆ ಸದಾ ದಾರೀದೀಪವಾಗಿವೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಸಮಾನತೆ, ಸಹೋದರತ್ವ ಹಾಗೂ ಪರಸ್ಪರ ಗೌರವದೊಂದಿಗೆ ಬದುಕಬೇಕು.
ಇಂತಹ ಮಹನೀಯರ ಜಯಂತಿಗಳನ್ನು ಆಚರಿಸುವುದರಿಂದ ಅವರ ಜೀವನ ಸಾಧನೆ ಹಾಗೂ ತತ್ವಾದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಮಾಜದ ಮುಖಂಡರು, ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು ಮಹರ್ಷಿ ವಾಲ್ಮೀಕಿಯವರಿಗೆ ಗೌರವ ನಮನ ಸಲ್ಲಿಸಿದರು.