ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಿರುವುದರಿಂದ ಜನ ಸಾಮಾನ್ಯರ ಬದುಕು ಅತಂತ್ರವಾಗಿದೆ-ಇಮ್ತಿಯಾಜ ಮಾನ್ವಿ
ಲೋಕದರ್ಶನ ವರದಿ
ಗದಗ 13: ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಅನೀಲ ಬೆಲೆಯನ್ನು ಏರಿಕೆ ಮಾಡಿದರೆ ರಾಜ್ಯ ಸರ್ಕಾರ ವಿದ್ಯುತ್, ಬಸ ಪ್ರಯಾಣ ದರ ಹಾಗೂ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿ ಬಡವರು ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ದರ ಏರಿಕೆಯಿಂದ ಗಾಯದ ಮೇಲೆ ಬರೆ ಎಳದಂತಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದಿನನಿತ್ಯ ಬಳಸುವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದ್ದರಿಂದ ಜನ ಸಮಾನ್ಯರ ಬದುಕು ಅತಂತ್ರವಾಗಿದೆ ಎಂದು ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷರಾದ ಇಮ್ತಿಯಾಜ.ಆರ್. ಮಾನ್ವಿ ಹಾಗೂ ಸಮಿತಿ ಮುಖಂಡ ಮೌಲಾಸಾಬ ಗಚ್ಚಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಕೇಂದ್ರ ಸರ್ಕಾರ ಅಚ್ಚೇ ದಿನ ತರುತ್ತೇವೆ ಎಂದು ಅಧಿಕಾರಕ್ಕೆ ಬಂದು 12 ವರ್ಷಗಳು ಕಳೆದರು ಸಹ ಈ ವರೆಗೊ ಬಡವರಿಗೆ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಅಭಿವೃಧ್ದಿ ಮಾಡೆದೇ ಕೇವಲ ಅಂಬಾನಿ, ಅಧಾನಿ ಅಂತಹ ದೊಡ್ಡ-ದೊಡ್ಡ ಕಾರ್ೋರೇಟ್ ಉದ್ಯೋಮಿಗಳ ಉದ್ದಾರ ಮಾಡಲಾಗಿದೆ. ಬೆಲೆ ಇಳಿಸುವ. ರೂಪಾಯಿ ಮೌಲ್ಯ ವೃಧ್ದಿಸುವ, ಉದ್ಯೋಗ ಕೊಡುವ ಹಾಗೂ ಕಪ್ಪು ಹಣ ತರುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕೇಂದ್ರದ ಬಿ.ಜೆ.ಪಿ ಸರ್ಕಾರ ಸಾಮಾನ್ಯ ಜನರಿಗೆ ಕೊಟ್ಟಿರುವ ಭರವಸೆಗಳನ್ನು ಮರೆತು ಇಂದು ಜನರ ವಿರುಧ್ದ ನಡೆದುಕೊಳ್ಳುತ್ತಿದೆ. ಏಕಾಏಕಿಯಾಗಿ ವಿದ್ಯುತ್ ದರ ಏರಿಕೆ ಹಾಗೂ ಬಸ ಪ್ರಯಾಣ ದರವನ್ನು ಏರಿಕೆ ಮಾಡಿದ ರಾಜ್ಯ ಸರ್ಕಾರದ ಜನವಿರೋಧಿ ಕ್ರಮವನ್ನು ಖಂಡಿಸುತ್ತೇವೆ.
ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆ, ಹಣದುಬ್ಬರ ಹಾಗೂ ಜೀವನ ನಿರ್ವಹಣೆಯ ವೆಚ್ಚದಿಂದ ಸಂಕಷ್ಟಕ್ಕೆ ಸಿಲುಕಿರುವ ಬಡವರು ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಮತ್ತಷ್ಟು ಹೊರೆಯಾಗಿದೆ. ಒಂದು ಕಡೆ ಪಂಚ್ ಗ್ಯಾರಂಟಿ ಯೋಜನೆಗಳ ಮೂಲಕ ಉಚಿತ ಸೌಲಭ್ಯಗಳನ್ನು ಘೋಷಿಸಿ, ಮತ್ತೊಂದು ಕಡೆ ಅಗತ್ಯ ವಸ್ತುಗಳ ಬೆಲೆ ಹೆಚ್ಚುಸುವ ಮೂಲಕ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಅಗತ್ಯ ವಸ್ತುಗಳ ನಿರಂತರ ದರ ಏರಿಕೆಯಿಂದ ರಾಜ್ಯದ ಜನಸಾಮಾನ್ಯರು ಮತ್ತು ಮಧ್ಯಮ ವರ್ಗದವರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರಗಳ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದ್ದರಿಂದ ದುಡಿಯುವ ವರ್ಗದವರ ಮೇಲೆ ಆರ್ಥಿಕವಾಗಿ ಸಾಕಷ್ಟು ಪರಿಣಾಮ ಬಿರುತ್ತಿದೆ.