ರಾಷ್ಟ್ರಧ್ವಜವು ದೇಶದ ಸಾರ್ವಭೌಮತ್ವದ ಪ್ರತೀಕ: ಡಿ.ಎಸ್ ಕುಲಕರ್ಣಿ
The national flag is a symbol of the country's sovereignty: D.S. Kulkarni
ಲೋಕದರ್ಶನ ವರದಿ
ಇಂಡಿ 25: ರಾಷ್ಟ್ರಧ್ವಜವು ದೇಶದ ಸ್ವಾತಂತ್ರ್ಯ, ಏಕತೆ ಮತ್ತು ಸಾರ್ವಭೌಮತ್ವದ ಪ್ರತೀಕವಾಗಿದ್ದು, ಪ್ರತಿಯೊಬ್ಬ ನಾಗರಿಕರು ಅದರ ಘನತೆ ಮತ್ತು ಗೌರವವನ್ನು ಕಾಪಾಡುವುದು ತಮ್ಮ ಕರ್ತವ್ಯ ಎಂದು ಎಸ್,ವಾಯ್ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಡಿ.ಎಸ್. ಕುಲಕರ್ಣಿ ಹೇಳಿದರು.
ಭಾರತ ಸೇವಾದಳ ಜಿಲ್ಲಾ ಸಮಿತಿ ವಿಜಯಪುರ, ತಾಲೂಕು ಸಮಿತಿ ಇಂಡಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇಂಡಿ ಇವರುಗಳ ಸಹಯೋಗದಲ್ಲಿ ತಾಲೂಕಿನ ಮಿರಗಿ ಗ್ರಾಮದ ಯಲ್ಲಾಲಿಂಗೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕರಿಗಾಗಿ, ಮಕ್ಕಳಿಗಾಗಿ ಆಯೋಜಿಸಲಾದ ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆ ಕುರಿತಾದ ಮಾಹಿತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಭಾರತ ಸೇವಾದಳ ವಲಯ ಸಂಘಟಕ ನಾಗೇಶ ಡೋಣೂರ ರಾಷ್ಟ್ರಧ್ವಜ, ರಾಷ್ಟ್ರಗೀತೆ ಕುರಿತು ಬೌದ್ಧಿಕವಾಗಿ ಮಾಹಿತಿ ನೀಡಿದರು. ಹಾಗೇ ರಾಷ್ಟ್ರಧ್ವಜ ಕಟ್ಟುವ, ಮಡಚುವ, ಹಾರಿಸುವ ವಿಧಾನವನ್ನು ಪ್ರಾಯೋಗಿಕವಾಗಿ ಎಲ್ಲಾ ಶಿಕ್ಷಕರಿಗೂ, ಮಕ್ಕಳಿಗೂ ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ ಹಾಗೂ ಮಕ್ಕಳು ಉಪಸ್ಥಿತರಿದ್ದರು. ಶಿಕ್ಷಕ ಮಾಣಿಕ್ ನಿಂಬಾಳ್ಕರ್ ನಿರೂಪಿಸಿದರು, ಶಿಕ್ಷಕ ಜೆ ಸಿ ಗಬಸಾವಳಗಿ ಸ್ವಾಗತಿಸಿದರು, ಇನ್ನೋರ್ವ ಶಿಕ್ಷಕಿ ನಂದಾ ಚೌವ್ಹಾಣ್ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 