ಹೊಸ ಮುಖ್ಯಮಂತ್ರಿಗಳು ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಲಿ - ಡಾ ರಾಜು ಕಂಬಾರ
The new Chief Minister should make guest lecturers permanent - Dr. Raju Kambara
ಮುಗಳಖೋಡ 07 : ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಯುಜಿಸಿ ಅರ್ಹ ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆ-ಖಾಯಮಾತಿ ನೀಡಬೇಕೆಂದು ನೂತನ ಮುಖ್ಯಮಂತ್ರಿಗಳಾದ ಮಾನ್ಯ ಡಿ. ಕೆ. ಶಿವಕುಮಾರ ಅವರಿಗೆ ರಾಜ್ಯ ಅತಿಥಿ ಉಪನ್ಯಾಸಕರ ಮುಖಂಡ ಡಾ.ರಾಜು ಕಂಬಾರ ಒತ್ತಾಯಿಸಿದ್ದಾರೆ.ಅವರು ಪಟ್ಟಣದಲ್ಲಿ ಗುರುವಾರ ಸ್ಥಳೀಯ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದ 25ನೇ ಮುಖ್ಯಮಂತ್ರಿಗಳಾಗಿ ಪ್ರಮಾಣ ಪ್ರಮಾಣವಚನ ಸ್ವೀಕರಿಸಿದ ಸನ್ಮಾನ್ಯ ಡಿ. ಕೆ. ಶಿವಕುಮಾರ ಅವರಿಗೆ ಅಖಿಲ ಕರ್ನಾಟಕ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿ ಮಾತನಾಡುತ್ತಾ, ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಯು ಜಿ ಸಿ ವಿದ್ಯಾರ್ಹತೆ ಹೊಂದಿದ ಅತಿಥಿ ಉಪನ್ಯಾಸಕರು 10 -15, 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಅವರಲ್ಲಿ ಸಾಕಷ್ಟು ಅನುಭವ ಹೊಂದಿದ ಹಿರಿಯ ಶಿಕ್ಷಕರ ವಯೋಮಿತಿ ಕೂಡಾ ಮೀರುತ್ತಿದೆ.
ಈಗಿರುವ ಅತಿಥಿ ಉಪನ್ಯಾಸಕರನ್ನೇ ಖಾಯಂಗೊಳಿಸಬೇಕೆಂದು ಹೇಳಿದರು. ಮುಂದುವರೆದು 2023ರ ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ -ಕಾಯಮಾತಿ ನೀಡುವ ಕುರಿತು ಭರವಸೆ ನೀಡಿದ್ದನ್ನು ಸ್ಮರಿಸಿದ ಅವರು, ನೂತನ ಮುಖ್ಯಮಂತ್ರಿಗಳು ಅತಿಥಿ ಉಪನ್ಯಾಸಕರ ಸೇವಾಭದ್ರತೆ- ಖಾಯಮಾತಿಗೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲ ಅತಿಥಿ ಉಪನ್ಯಾಸಕರು ಸಂಘಟನಾತ್ಮಕವಾಗಿ ಹಿಂದಿನ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದ್ದೇವೆ. ಅದಕ್ಕಾಗಿ ಎಲ್ಲ ಸಮಾನ ಮನಸ್ಕರು ಬೆಳಗಾವಿಯಲ್ಲಿ ಸೇರಿ ಹೊಸ ನಿಯೋಗ ರಚನೆ ಮಾಡಲಿದ್ದೇವೆ ಎಂದು ರಾಜ್ಯ ಅತಿಥಿ ಉಪನ್ಯಾಸಕರ ಮುಖಂಡ ಡಾ.ರಾಜು ಕಂಬಾರ ಸುದ್ದಿಗಾರರಿಗೆ ತಿಳಿಸಿದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 