ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆ 215ಕ್ಕೇರಿಕೆ
ಬೆಂಗಳೂರು,
ಏ 11, ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 8 ಹೊಸ ಕೊರೋನಾ ಸೋಂಕಿನ ಪ್ರಕರಣಗಳು
ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 215ಕ್ಕೇರಿಕೆಯಾಗಿದೆ. ಮೈಸೂರಿನಲ್ಲಿ ಮತ್ತೆ ಐದು
ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಮೈಸೂರಿನಲ್ಲಿ ಸೋಂಕಿತರ ಸಂಖ್ಯೆ
47ಕ್ಕೇರಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಅಂದರೆ 72 ಸೋಂಕಿನ ಪ್ರಕರಣಗಳುವರದಿಯಾಗಿವೆ. ಹೊಸದಾಗಿ ಬಿಬಿಎಂಪಿ ವ್ಯಾಪ್ತಿಯ 10 ವರ್ಷದ ಮಗುವಿಗೂ ಸೋಂಕು
ತಗುಲಿರುವುದು ದೃಢಪಟ್ಟಿದೆ. ಜ್ಯುಬಿಲಿಯೆಂಟ್ ಔಷಧ ಕಂಪನಿಯ ಸೋಂಕಿತ ಕಾರ್ಮಿಕರೊಂದಿಗೆ
ಸಂಪರ್ಕ ಹೊಂದಿದ 46, 43, 27, 31, 26 ವರ್ಷದ ವ್ಯಕ್ತಿಗಳಲ್ಲಿ ಸೋಂಕು ದೃಢಪಟ್ಟಿದೆ.
ಇದನ್ನು ಹೊರತುಪಡಿಸಿ, ಬಿಬಿಎಂಪಿ ವ್ಯಾಪ್ತಿಯ 32 ವರ್ಷದ ಪುರುಷ, ಬೀದರ್ ನ 50 ವರ್ಷದ
ಮಹಿಳೆಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಲ್ಲಿಯವರೆಗೆ ಆರು ಮಂದಿ ಸೋಂಕಿನಿಂದ
ಮೃತಪಟ್ಟಿದ್ದು, 37 ಜನರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ
ತಿಳಿಸಿದೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 