ಯಾದಗಿರಿಯಲ್ಲಿ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆ
ಯಾದಗಿರಿ, ಮೇ 18, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆ ಆಗಿದೆ.ಸೋಮವಾರ ಮಧ್ಯಾಹ್ನದವರೆಗೆ ಓರ್ವ ಮಹಿಳೆ ಸೇರಿ ಮತ್ತೆ ಐದು ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದರಿಂದ ಕೋವಿಡ್-19 ಸೋಂಕಿತರ ಸಂಖ್ಯೆ 10ಕ್ಕೆ ಏರಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ತಿಳಿಸಿದ್ದಾರೆ.25 ವರ್ಷದ ಮಹಿಳೆ (ರೋಗಿ ಸಂಖ್ಯೆ -1188), 25 ವರ್ಷದ ಪುರುಷ (ರೋಗಿ ಸಂಖ್ಯೆ-1189), 30 ವರ್ಷದ ಪುರುಷ (ರೋಗಿ ಸಂಖ್ಯೆ-1190), 15 ವರ್ಷದ ಯುವಕ (ರೋಗಿ ಸಂಖ್ಯೆ-1191) ಮತ್ತು 30 ವರ್ಷದ ಪುರುಷ (ರೋಗಿ ಸಂಖ್ಯೆ-1192) ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ ಎಂದರು.ಇವರೆಲ್ಲರೂ ಮಹಾರಾಷ್ಟ್ರದ ಮುಂಬೈನಿಂದ ಯಾದಗಿರಿ ಜಿಲ್ಲೆಗೆ ಆಗಮಿಸಿದ್ದರು. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಯಾದಗಿರಿಯ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 