ಯರಗಟ್ಟಿ

ಕೊನೆಯವರೆಗೂ ಜತೆಗಿರುವುದು ಕಲಿತ ವಿದ್ಯೆ ಮಾತ್ರ: ಜೂಗನವರ

ಕೊನೆಯವರೆಗೂ ಜತೆಗಿರುವುದು ಕಲಿತ ವಿದ್ಯೆ ಮಾತ್ರ: ಜೂಗನವರ

ಯರಗಟ್ಟಿ 03: ನಾವು ಗಳಿಸಿದ ಆಸ್ತಿ, ಅಂತಸ್ತು, ಸಂಪತ್ತು ಯಾವುದೂ ಕೊನೆಯವರೆಗೂ ಉಳಿಯೊಲ್ಲ. ಆದರೆ ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜತೆಗಿರುತ್ತದೆ ಎಂದು ನಿವೃತ್ತ ಶಿಕ್ಷಕರಾದ ಆರ್. ಎಲ್. ಜೂಗನವರ ಅಭಿಪ್ರಾಯಪಟ್ಟರು.

ಪಟ್ಟಣದ ಬಸವೇಶ್ವರ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ 2000-21ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜೀವನದಲ್ಲಿ ಗುರಿ, ಚಲ, ಗುರುವಿನ ಆಶೀರ್ವಾದ ಇದ್ದರೆ ಮಾತ್ರವೇ ವಿದ್ಯೆ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು ಸಾಧ್ಯ ಎಂದರು.

ನಾವು ಇಂದು ಉನ್ನತ ಶಿಕ್ಷಣ ಪಡೆದ ಸಮಾಜದಲ್ಲಿ ಒಳ್ಳೆಯ ಸ್ಥಾನಮಾನ ಪಡೆದಿದ್ದರೆ ಅದರ ಹಿಂದೆ ಈ ಸಮಾಜದ ಕೂಲಿ, ಕಾರ್ಮಿಕ ಸೇರಿದಂತೆ ಪ್ರತಿಯೊಬ್ಬರ ಶ್ರಮ ಅಡಗಿರುತ್ತದೆ. ಅವರು ಬೆವರು ಸುರಿಸಿ ಸಂಪಾದಿಸಿದ ಹಣವನ್ನು ಖಚರ್ು ಮಾಡುವ ಮೂಲಕ ಕಟ್ಟಿದ ತೆರಿಗೆಯ ಹಣದಿಂದಲೆ ನಾವು ಈ ಸ್ಥಾನಕ್ಕೇರಿದ್ದೇವೆ ಎಂಬುದನ್ನು ಯಾರೂ ಮರೆಯಬಾರದು ಎಂದರು.

ನಾವು ಇಂದು ಏನಾದರೂ ಗಳಿಸಿದ್ದರೆ ಅದೆಲ್ಲವೂ ಈ ಸಮಾಜದಿಂದ ಗಳಿಸಿದ್ದೆ. ಹಾಗಾಗಿ ಈ ಸಮಾಜದಿಂದ ಪಡೆದ ಒಂದಷ್ಟನ್ನಾದರೂ ನಾವು ಮತ್ತೆ ಸಮಾಜಕ್ಕ ವಾಪಸ್ ಮಾಡಬೇಕಾಗುತ್ತದೆ. ಆ ಮೂಲಕ ಅಕ್ಷರ ಕಲಿಸಿದ ಗುರುಗಳು, ಜನ್ಮ ಕೊಟ್ಟ ಹೆತ್ತವರು, ಆಡಿ ಬೆಳೆದ ಭೂಮಿಯ ಋಣವನ್ನು ತೀರಿಸಲು ಸಾಧ್ಯವಾಗುತ್ತದೆ. ಇಂದಿನ ದಿನಮಾನದಲ್ಲಿ ನಗರ ಪ್ರದೇಶಗಳಲ್ಲಿ ಹೆತ್ತ ತಂದೆ ತಾಯಿಯನ್ನು ವೃದ್ರಾಶ್ರಮಕ್ಕೆ ಸೇರಿಸಬೇಡಿ ಅವರನ್ನು ಚೆನ್ನಾಗಿ ಮತ್ತು ಪೂಜ್ಯ ಭಾವನೆಯಿಂದ ನೋಡಿಕೊಳ್ಳಿ ಹಾಗೂ ಮಕ್ಕಳಿಗೆ ಮೊಬೈಲ್ ಫೋನ್ ಕೊಡದೆ ಪುಸ್ತಕ ಕೊಡಿ ಎಂದು ಹೇಳಿದರು.

ನಿವೃತ್ತ ಶಿಕ್ಷಕರಾದ ಟಿ. ಎಚ್. ಪಾಟೀಲ, ಬಿ. ಎಸ್. ದಂಡನಾಯಕ, ಎ. ಎಂ. ಚವಡಪ್ಪನವರ, ಆರ್. ಎ. ಗಲಬಿ, ಎಸ್. ಎಸ್. ಕುರುಬಗಟ್ಟಿಮಠ, ಎಸ್. ಬಿ. ಮದ್ದಾನಿ, ಟಿ. ಎಂ. ಕಾಮಣ್ಣವರ, ನಿವೃತ್ತ ಸಿಬ್ಬಂದಿಯಾದ ಮೋಹನ ಹುಣಶೀಕಟ್ಟಿ, ಜೀವನ ಹಳ್ಳಂಡಿ, ಮುಖ್ಯೋಪಾಧ್ಯಾಯರಾದ ಬಿ. ಎಸ್. ಆಲದಕಟ್ಟಿ ಹಾಗೂ 2000-21ನೇ ಸಾಲಿನ ಹಳೆ ವಿದ್ಯಾರ್ಥಿಗಳು ಸೇರಿದಂತೆ ಅನೇಕ ಉಪಸ್ಥಿತರಿದ್ದರು 

ಸುದ್ದಿ ಓದಿ