ಧಾರವಾಡ - ಹುಬ್ಬಳ್ಳಿ

ಯಶಸ್ವಿಯಾಗಿ ಪ್ರದರ್ಶನಗೊಂಡ “ಸ್ವಾತಂತ್ರ್ಯದ ಓಟ” ನಾಟಕ

ಯಶಸ್ವಿಯಾಗಿ ಪ್ರದರ್ಶನಗೊಂಡ “ಸ್ವಾತಂತ್ರ್ಯದ ಓಟ” ನಾಟಕ

ಲೋಕದರ್ಶನ ವರದಿ 

ಧಾರವಾಡ 06 : ರಂಗಾಯಣ ಧಾರವಾಡವು ಭಾನುವಾರದಂದು ನಾಡೋಜ ಡಾ. ಪಾಟೀಲ ಪುಟ್ಟಪ್ಪ ಸಭಾಭವನ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಶ್ರೀ ಬೊಳುವಾರು ಮಹಮ್ಮದ್ ಕುಂಞ ಅವರ ಕಾದಂಬರಿ ಆಧಾರಿತ, ಶ್ರೀ ನಟರಾಜ್ ಹೊನ್ನವಳ್ಳಿ ನಿರ್ದೇಶನದ, ಶಿವಮೊಗ್ಗ ರಂಗಾಯಣ ಪ್ರಸ್ತುತಿಯ ‘ಸ್ವಾತಂತ್ರ್ಯದ ಓಟ’ ನಾಟಕ ಯಶಸ್ವಿಯಾಗಿ ಪ್ರದರ್ಶನಗೊಂಡಿತು. ಈ ಸಂದರ್ಭದಲ್ಲಿ ರಂಗಾಯಣದ ನಿರ್ದೇಶಕರಾದ ಝಕೀರ ನದಾಫ, ಆಡಳಿತಾಧಿಕಾರಿ ಶಶಿಕಲಾ ಹುಡೇದ ಸೇರಿದಂತೆ ಇತರರು ಇದ್ದರು. 


ಸುದ್ದಿ ಓದಿ