ಆಹಾರ ಪೊಟ್ಟಣ ವಿತರಣೆಯಲ್ಲಿ ರಾಜಕೀಯ: ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು, ಏ.30, ನಮ್ಮ ನಿರಂತರ ದೂರುಗಳ ನಂತರವೂ ಬಡವರಿಗಾಗಿ ಸರ್ಕಾರ ಹಮ್ಮಿಕೊಂಡಿರುವ ಆಹಾರ ಪೊಟ್ಟಣ/ ಆಹಾರ ಸಾಮಗ್ರಿಗಳ ವ್ಯಾಂಪರ್ಸ್ ವಿತರಣೆಯನ್ನು ಬಿಜೆಪಿ ಶಾಸಕರು ಮತ್ತು ನಾಯಕರು ಪಕ್ಷದ ಕಾರ್ಯಕ್ರಮವಾಗಿ ನಡೆಸುತ್ತಿದ್ದಾರೆ. ಈ ರಾಜಕೀಯ ದುರುಪಯೋಗವನ್ನು ನಿಲ್ಲಿಸದೆ ಇದ್ದರೆ ಬೀದಿಗಿಳಿದು ಪ್ರತಿಭಟಿಸಬೇಕಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಬಿಜೆಪಿ ನಾಯಕರ ಹಸ್ತಕ್ಷೇಪದಿಂದಾಗಿ ವಾಹನ ಮತ್ತು ವಾಹನ ಚಾಲಕರ ಪಾಸ್ ವಿತರಣೆ ಪಾರದರ್ಶಕವಾಗಿ ನಡೆಯದೆ ದುರುಪಯೋಗವಾಗುತ್ತಿದೆ. ಲಾಕ್ ಡೌನ್ ಇದ್ದರೂ ನಗರದಲ್ಲಿನ ವಾಹನದಟ್ಟಣೆಗೆ ಬೇಕಾಬಿಟ್ಟಿ ಪಾಸ್ ವಿತರಣೆ ಕಾರಣ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ, ಆಡಳಿತವನ್ನು ನಿಮ್ಮ ಪಕ್ಷಕ್ಕೆ ಹೊರಗುತ್ತಿಗೆ ಮಾಡಿದ್ದೀರಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 