ಹೂವಿನ ಹಡಗಲಿ

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿ

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿ

ಹೂವಿನಹಡಗಲಿ 17: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಮತದಾರರು ಕಡ್ಡಾಯವಾಗಿ ಭಾಗವಹಿಸಿ, ಅಗತ್ಯ ಮಾಹಿತಿಯನ್ನು ಅಧಿಕಾರಿಗಳಿಗೆ ನೀಡಿ ಪರಿಷ್ಕರಣೆ ಕಾರ್ಯಕ್ಕೆ ಸಹಕರಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಅಯ್ಯನಗೌಡ ಕೊಟ್ರಗೌಡ ಮನವಿ ಮಾಡಿದರು.  ಪಟ್ಟಣದ ಶಾಸ್ತ್ರಿ ವೃತ್ತದಲ್ಲಿ ಶುಕ್ರವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ವಿವಿಧ ಸರ್ಕಾರಿ ಶಾಲೆ-ಕಾಲೇಜುಗಳ ಸಹಯೋಗದಲ್ಲಿ ಆಯೋಜಿಸಿದ್ದ ಮತದಾರರ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  

ಕೇಂದ್ರ ಚುನಾವಣಾ ಆಯೋಗ ಹಮ್ಮಿಕೊಂಡಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ ಈಗಾಗಲೇ ದೇಶದ ಹಲವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದು, ಕರ್ನಾಟಕದಲ್ಲೂ ಜೂನ್ 30ರಿಂದ ಜುಲೈ 29ರವರೆಗೆ ನಡೆಯಲಿದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ಗೊಂದಲವಿಲ್ಲ. ಸಾರ್ವಜನಿಕರು ತಪ್ಪು ಮಾಹಿತಿಗೆ ಕಿವಿಗೊಡದೆ ತಮ್ಮ ಮತದಾನದ ಹಕ್ಕನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪರಿಷ್ಕರಣೆ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಹೇಳಿದರು.  ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಇಒ ಪರಮೇಶ್ವರ, ಕಂದಾಯ ಇಲಾಖೆ ಸಿಬ್ಬಂದಿ, ಮುಖ್ಯಾಧಿಕಾರಿ ಹನುಮಂತಪ್ಪ, ಎಪಿಎಂಸಿ ಕಾರ್ಯದರ್ಶಿ ತಿಮ್ಮಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ