ಬಳ್ಳಾರಿ

ಸಾರ್ವಜನಿಕರು ರೋಗಗಳ ಕುರಿತು ಮುಂಜಾಗ್ರತಾ ಕ್ರಮಕೈಗೊಳ್ಳಿ

ಸಾರ್ವಜನಿಕರು ರೋಗಗಳ ಕುರಿತು ಮುಂಜಾಗ್ರತಾ ಕ್ರಮಕೈಗೊಳ್ಳಿ


ಬಳ್ಳಾರಿ,ಅ.18: ಸಿರುಗುಪ್ಪ ನಗರಸಭಾ ವ್ಯಾಪ್ತಿಯ ಸಾರ್ವಜನಿಕರು ಡೆಂಗ್ಯೂ, ಮಲೇರಿಯಾ, ಚಿಕನ್‌ಗುನ್ಯಾ, ಕಾಲರಾ, ಟೈಫೈಡ್ ಹಾಗೂ ಇತರೆ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಗರಸಭಾ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಮುಂಜಾಗ್ರತೆಗಾಗಿ ನೀರಿನ ತೊಟ್ಟಿ, ಡ್ರಮ್ಮು, ಬ್ಯಾರೆಲ್, ಏರ್ ಕೂಲರ್ ಇತ್ಯಾದಿಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಒಣಗಿಸಿ ಮತ್ತೆ ಭರ್ತಿ ಮಾಡಿಕೊಳ್ಳಬೇಕು. ಟೈರು, ತೆಂಗಿನಕಾಯಿ ಚಿಪ್ಪು, ಒಡೆದ ಬಾಟಲಿ ಮುಂತಾದವುಗಳಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರವಹಿಸುವುದು, ಸೊಳ್ಳೆ ನಿರೋಧಕ ಹಾಗೂ ಸೊಳ್ಳೆ ಪರದೆಯನ್ನು ಬಳಸಿ ಸೊಳ್ಳೆಗಳು ಕಚ್ಚದಂತೆ ಎಚ್ಚರಿಕೆವಹಿಸುವಂತೆ ಅವರು ತಿಳಿಸಿದ್ದಾರೆ. 


ಸುದ್ದಿ ಓದಿ