ಮಕ್ಕಳಿಗೂ ತಪ್ಪದೇ ಕೇಂದ್ರಗಳಿಗೆ ತೆರಳಿ ಲಸಿಕೆ ಹಾಕಿಸಿ: ಶಾಸಕ ಅರುಣಕುಮಾರ
ರಾಣಿಬೆನ್ನೂರ31: ಮಕ್ಕಳಲ್ಲಿ ಪೋಲಿಯೋ ರೋಗ ಬರದಂತೆ ತಡೆಗಟ್ಟಲು ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ ಸಹ ಪುನ: 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ತಪ್ಪದೇ ತಮ್ಮ ಮನೆಯ ಸಮೀಪದ ಕೇಂದ್ರಗಳಿಗೆ ತೆರಳಿ ಲಸಿಕೆ ಹಾಕಿಸಲು ಸಾರ್ವಜನಿಕರು ಮುಂದಾಗಬೇಕು ಎಂದು ಶಾಸಕ ಅರುಣಕುಮಾರ ಪೂಜಾರ ಹೇಳಿದರು.
ರವಿವಾರ ಸ್ಥಳೀಯ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ ಮಕ್ಕಳಿಗೆ ಪಲ್ಸ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪೋಲಿಯೋದಿಂದ ಮುಂದಾಗುವ ಅಂಗವಿಕಲತೆಯನ್ನು ನಿಯಂತ್ರಿಸಬಹುದು. ಪೋಷಕರು ಹೆಚ್ಚಿನ ಕಾಳಜಿ ವಹಿಸಿ ಮಕ್ಕಳಿಗೆ ಪೋಲಿಯೋ ಲಸಿಕೆ ಹನಿ ಹಾಕಿಸಬೇಕು ಎಂದು ಪುನರುಚ್ಚರಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಕನಾಥ ಬಾನುವಳ್ಳಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಗರಸಭೆ ಅಧ್ಯಕ್ಷೆ ರೂಪಾ ಚಿನ್ನಿಕಟ್ಟಿ, ತಾಪಂ ಅಧ್ಯಕ್ಷೆ ಗೀತಾ ವಸಂತ ಲಮಾಣಿ ಜಿಪಂ ಸದಸ್ಯೆ ಮಂಗಳಗೌರಿ ಪೂಜಾರ, ರೋಟರಿ ಅಧ್ಯಕ್ಷ ಜಗದೀಶ ಕಲ್ಯಾಣಿ, ಇನ್ನರ್ವ್ಹಿಲ್ ಅಧ್ಯಕ್ಷೆ ವಿನೂತಾ ಜಗದೀಶ ಕಲ್ಯಾಣಿ, ಐಎಂಎ ಅಧ್ಯಕ್ಷ ಡಾ. ಪ್ರವೀಣ ಖನ್ನೂರು, ಡಾ. ಸಂತೋಷಕುಮಾರ ಜಿ, ಡಾ. ಪರಮೇಶ್ವರಪ್ಪ ಡಾ. ಕಾಂತೇಶ ಭಜಂತ್ರಿ, ನಾಗರಾಜ ಕುಡಪಲಿ, ರೋಟರಿ ಸಂಸ್ಥೆಯ ಸದಸ್ಯರು, ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕ ಆಸ್ಪತ್ರೆ, ಹೆರಿಗೆ ಆಸ್ಪತ್ರೆ, ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರು, ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿಯ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.