ಪುಷ್ಪ ಬೆಳೆಗಾರರಿಗೆ ಘೋಷಿಸಿದ ಪರಿಹಾರ ಔಷಧಿಗೂ ಸಾಕಾಗದು: ಸಿದ್ದರಾಮಯ್ಯ
ಬಾಗಲಕೋಟೆ, ಮೇ 6,ಹೂವು ಬೆಳೆಗಾರರಿಗೆ ಸರ್ಕಾರ ಘೋಷಿಸಿರುವ ಹೆಕ್ಟೇರ್‌ಗೆ 25ಸಾವಿರ ರೂ.ಪರಿಹಾರ ರೈತರು ಔಷಧಿ ಹೊಡೆಯುವುದಕ್ಕೂ ಸಾಕಾಗದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದ ಕ್ರಮವನ್ನು ಟೀಕಿಸಿದ್ದಾರೆ.ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸರ್ಕಾರ ಅಗಸ, ಕ್ಷೌರಿಕ, ಚಾಲಕರಿಗೆ 5ಸಾವಿರ ಪರಿಹಾರಧನ ಘೋಷಿಸಿರುವುದು ಸಂತೋಷದಾಯಕವಾದರೂ ಇಷ್ಟೊಂದು ಕಡಿಮೆ ಮೊತ್ತದ ಹಣ ಸಾಕಾಗುವುದಿಲ್ಲ. 5ಸಾವಿರ ರೂ.ಗಳ ಬದಲಿಗೆ 10 ಸಾವಿರ ಘೋಷಿಸಬೇಕು.
ಅಲ್ಲದೇ ಚಮ್ಮಾರ, ಕಮ್ಮಾರ, ಬೀದಿಬದಿ ವ್ಯಾಪಾರಿಗಳು ಸೇರಿದಂತೆ ಇತರೆ ಎಲ್ಲಾ ಅಸಂಘಟಿತ ವರ್ಗದ ಕಾರ್ಮಿಕರಿಗೂ ಸರ್ಕಾರ ಪ್ಯಾಕೇಜ್ ಘೋಷಿಸಬೇಕು ಎಂದರು.ಲಾಕ್ ಡೌನ್ ನಿಂದ ರೈತರು ಸಾಕಷ್ಟು ಸಂಕಷ್ಟಕ್ಕೊಳಗಾದರೂ ಸರ್ಕಾರ ರೈತರನ್ನು ಸಂಪೂರ್ಣವಾಗಿ ಕಡೆಗಣಿಸಿರುವುದು ಖಂಡನೀಯ ಎಂದರು.ಬಾದಾಮಿ ವಿಧಾನಸಭೆ ಕ್ಷೇತ್ರದಲ್ಲಿ ಕೊರೊನಾ ಸೋಂಕು ಕಂಡು ಬಂದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಬದಾಮಿ ಶಾಸಕರೂ ಆಗಿರುವ ಸಿದ್ದರಾಮಯ್ಯಬಾಗಲಕೋಟೆ ಜಿಲ್ಲಾಧಿಕಾರಿಗಳು, ಬಾದಾಮಿ ತಹಶೀಲ್ದಾರ್, ತಾಲೂಕು ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.13 ಪಾಸಿಟಿವ್ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ನೋಡಿಕೊಳ್ಳಬೇಕು. ಮಾಸ್ಕ್, ಸ್ಯಾನಿಟೈಸರ್ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕ್ಷೇತ್ರದ ಜನರಲ್ಲಿಯೂ ಮನವಿ ಮಾಡಿದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 