ಮಾನವ ಹಕ್ಕುಗಳ ಸಮರ್ಪಕ ಅನುಷ್ಠಾನದಲ್ಲಿ ನ್ಯಾಯಾಂಗದ ಪಾತ್ರ ಪ್ರಮುಖ: ಬಿರಾದಾರ

ಮಾನವ ಹಕ್ಕುಗಳ ಸಮರ್ಪಕ ಅನುಷ್ಠಾನದಲ್ಲಿ ನ್ಯಾಯಾಂಗದ ಪಾತ್ರ ಪ್ರಮುಖ: ಬಿರಾದಾರ
ವಿಶ್ವ ಮಾನವ ಹಕ್ಕುಗಳ ದಿನ ಆಚರಣೆಯಲ್ಲಿ ಅಧ್ಯಕ್ಷ ಬಿ.ಸಿ.ಬಿರಾದಾರ ಮಾತನಾಡಿದ್ದರು.

ಬಳ್ಳಾರಿ10: ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ತಡೆಗಟ್ಟುವ ನಿಟ್ಟಿನಲ್ಲಿ ನ್ಯಾಯಾಂಗ ಬಹುಮುಖ್ಯ ಪಾತ್ರ ಇದುವರೆಗೆ ನಿರ್ವಹಿಸಿದೆ. ಮುಂದೆಯೂ ಅಷ್ಟೇ ಪರಿಣಾಮಕಾರಿಯಾಗಿ ನಿರ್ವಹಿಸಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಸಿ.ಬಿರಾದಾರ ಅವರು ಹೇಳಿದರು. 

      ಕನರ್ಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ,ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ  ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

        ಮಾನವ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳುವುದು ಅವಶ್ಯಕ ಎಂದು ಹೇಳಿದ ಅವರು ಮಾನವ ಹಕ್ಕುಗಳ ಬಗ್ಗೆ ತಿಳಿವಳಿಕೆ ಇಲ್ಲದಿದ್ದರೆ ಮನೆಯಲ್ಲಾಗಲಿ,ಸಮಾಜದಲ್ಲಾಗಲಿ ನಾವು ಮೋಸ ಹೋಗುತ್ತೇವೆ. 

 ಮಾನವ ಹಕ್ಕುಗಳ ಬಗ್ಗೆ ತಿಳಿದುಕೊಳ್ಳುವುದು ನಮ್ಮ ಕರ್ತವ್ಯ ಎಂದರು. ಮಾನವ ಹಕ್ಕುಗಳನ್ನು ಜಾರಿಗೆ ತರುವಲ್ಲಿ ನಮ್ಮ ದೇಶ ಯಾವುದೇ ರೀತಿಯಲ್ಲಿ ಹಿಂದೆ ಬಿದ್ದಿಲ್ಲ ಎಂದರು. 

  ವಿ.ಎಸ್.ಆರ್ ಕಾನೂನು ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಕೆ.ರಜನಿಕುಮಾರಿ ವಿಶೇಷ ಉಪನ್ಯಾಸ ನೀಡಿ, ಮಾನವ ಹಕ್ಕುಗಳೆಲ್ಲವು ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಅವುಗಳನ್ನು ನಾವು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತಿದ್ದೇವೆ ಎಂದರು. ನಮ್ಮ ಮಾನವ ಹಕ್ಕುಗಳ ಬಗ್ಗೆ ಸಮರ್ಪಕವಾಗಿ ತಿಳಿದುಕೊಳ್ಳುವುದು ಎಲ್ಲರ ಕರ್ತವ್ಯ; ಇಲ್ಲದಿದ್ದಲ್ಲಿ ಮೋಸ ಹೋಗುವ ಸಾಧ್ಯತೆ ಹೆಚ್ಚಿರುತ್ತದೆ ಎಂಬ ಅಭಿಪ್ರಾಯಗಳನ್ನು ತಮ್ಮ ಮಾತುಗಳಲ್ಲಿ ವ್ಯಕ್ತಪಡಿಸಿದ ರಜನಿ ಅವರು ನಮ್ಮ ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿ ಸರಕಾರಗಳು ಶಾಸನ ರಚಿಸುವಂತಿಲ್ಲ; 

     ರಚಿಸಿದರೇ ಅದು ಶೂನ್ಯವಾಗುತ್ತದೆ ಎಂದು ಸಂವಿಧಾನದಲ್ಲಿಯೇ ಸ್ಪಷ್ಟಪಡಿಸಲಾಗಿದೆ ಎಂದರು. ಮಾನವ ಹಕ್ಕುಗಳ ಬಗ್ಗೆ ಯಾವುದೇ ರೀತಿಯ ತಿಳಿವಳಿಕೆ ಇಲ್ಲದೇ ಈ ಹಿಂದೆ ನಮ್ಮ ಹಿರಿಯರು ಮಾನವ ಹಕ್ಕುಗಳನ್ನು ಸಂಪೂರ್ಣವಾಗಿ ಬಳಸುತ್ತಿದ್ದರು ಎಂಬುದನ್ನು ವಿವಿಧ ಉದಾಹರಣೆಗಳ ಮೂಲಕ ಸ್ಪಷ್ಟಪಡಿಸಿದರು. 

         ಜಿಲ್ಲಾಧಿಕಾರಿ ಕಚೇರಿಯ ತಹಶಿಲ್ದಾರ ವಿಶ್ವಜೀತ್ ಮೆಹತಾ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿ ಎಸ್.ಬಿ.ಹಂದ್ರಾಳ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಾವಣ್ಯ ಅವರು ಮಾತನಾಡಿದರು. ವಕೀಲರ ಸಂಘದ ಜಿಲ್ಲಾಧ್ಯಕ್ಷ ಎಚ್.ಎಂ.ಅಂಕಲಯ್ಯ, ಕಾರ್ಯದಶರ್ಿ ಎಸ್.ಬಿ.ಅರಸೂರು, ಸರಕಾರಿ ವಕೀಲ ಕೆ.ಯರ್ರಿಗೌಡ, ತಹಸೀಲ್ದಾರ್ ನಾಗರಾಜ, ಮಹಾನಗರ ಪಾಲಿಕೆ ಆಯುಕ್ತ ಮಹ್ಮದ ಮುನಿರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕ ಬಿ.ನಾಗರಾಜ ಮತ್ತಿತರರು ಇದ್ದರು. ಇದಕ್ಕೂ ಮುಂಚೆ  ಮಾನವ ಹಕ್ಕುಗಳ ಜಾಗೃತಿ ಮೂಡಿಸುವ ಜಾಗೃತಿ ಜಾಥಾವು ಮುನ್ಸಿಪಲ್ ಕಾಲೇಜು ಮೈದಾನದಿಂದ ಜೋಳದ ರಾಶಿ ದೊಡ್ಡನಗೌಡ ರಂಗಮಂದಿರದವರೆಗೆ ನಡೆಯಿತು. ಜಾಥಾದಲ್ಲಿ ಶಾಲಾ-ಕಾಲೇಜು ಮಕ್ಕಳು ಪಾಲ್ಗೊಂಡಿದ್ದರು.


 

ಸುದ್ದಿ ಓದಿ