ಶಿಕ್ಷಕರು ಅಭಿಯಂತರರ ಪಾತ್ರ ಮಹತ್ವದ್ದು

ಶಿಕ್ಷಕರು ಅಭಿಯಂತರರ ಪಾತ್ರ ಮಹತ್ವದ್ದು  The role of teachers and engineers is significant

ಲೋಕದರ್ಶನ ವರದಿ 

ಬೆಳಗಾವಿ 16: ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಎಷ್ಟು ಮುಖ್ಯವೋ, ದೇಶ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಅಭಿಯಂತರರ ಪಾತ್ರವೂ ಅಷ್ಟೇ ಪ್ರಮುಖವಾಗಿದೆ ಎಂದು ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಹೇಳಿದರು.  

ಶಿವಬಸವ ನಗರದ ಎಸ್‌.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಶಿಕ್ಷಕರ ಹಾಗೂ ಅಭಿಯಂತರರ ದಿನಾಚರಣೆ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.  

ದೇಶದ ಅಭಿವೃದ್ಧಿಗೆ ಸಾಕ್ಷಿಯಾಗುವಂತಹ ವ್ಯಕ್ತಿಗಳನ್ನು ರೂಪಿಸುವಲ್ಲಿ ಶಿಕ್ಷಕರ ಕೊಡುಗೆ ಅಪಾರವಾಗಿದೆ. ಉತ್ತಮ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರು ಮತ್ತು ಅಭಿಯಂತರರ ಪಾತ್ರ ಮಹತ್ವದ್ದಾಗಿದೆ ಎಂದರು.  

ಮುಖ್ಯ ಅತಿಥಿ ಪಾಲಿಹೈಡ್ರಾನ್ ಸಿಸ್ಟಮ್ಸ್‌ ಪ್ರೈವೇಟ್ ಲಿಮಿಟೆಡ್ನ ಉಪಾಧ್ಯಕ್ಷ ಚಂದ್ರಶೇಖರ ಸುಭಾಷರಾವ್ ಇನಾಮದಾರ್ ಮಾತನಾಡಿ, ಉದ್ಯಮರಂಗಕ್ಕೆ ಕೇವಲ ಸೈದ್ಧಾಂತಿಕ ಜ್ಞಾನ ಸಾಲದು. ಪ್ರಾಯೋಗಿಕ ಕೌಶಲ್ಯ, ಸಮಸ್ಯೆಗಳನ್ನು ಪರಿಹರಿಸುವ ಸಾಮರ್ಥ್ಯ ಹಾಗೂ ಸದಾ ಕಲಿಯುವ ಉತ್ಸಾಹ ಅಗತ್ಯ ಎಂದು ಹೇಳಿದರು.  

ಕಾಲೇಜಿನ ಪ್ರಾಚಾರ್ಯ ಡಾ. ಬಿ.ಆರ್‌. ಪಟಗುಂದಿ ಪ್ರಾಸ್ತಾವಿಕವಾಗಿ ಮಾತನಾಡಿ, ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರು ಹಾಗೂ ಅಭಿಯಂತರರ ಕೊಡುಗೆ ಅಪಾರವಾಗಿದೆ ಎಂದರು. ಪ್ರೊ. ಎಸ್‌.ಸಿ. ಜಂಪಾ ನಿರೂಪಿಸಿ, ವಂದಿಸಿದರು. ಮಹಾವಿದ್ಯಾಲಯದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.