ಮನೆಯ ಮೇಲ್ಛಾವಣಿ ಕುಸಿತ ಮೃತರ ಕುಟುಂಬಕ್ಕೆ 15ಲಕ್ಷ ರೂ. ಪರಿಹಾರದ ಚೆಕ್ ವಿತರಣೆ
ಲೋಕದರ್ಶನ ವರದಿ
ಕೊಪ್ಪಳ: ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮೂವರು ಸಾವನ್ನಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಸಂಸದ ಸಂಗಣ್ಣ ಕರಡಿ ಮತ್ತು ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಪರಿಹಾರದ ಚೆಕ್ ವಿತರಿಸಿದರು.ನಿನ್ನೆ ಬೆಳಿಗ್ಗೆ ಕೊಪ್ಪಳ ತಾಲೂಕಿನ ಯಲಮಗೇರಿಯಲ್ಲಿ ಮನೆ ಮೇಲ್ಛಾವಣಿ ಕುಸಿದು ಸುಜಾತಾ (22) ಅಮರೇಶ್ (18) ಹಾಗೂ ಗವಿಸಿದ್ದಪ್ಪ ( 15) ಸಾವನ್ನಪ್ಪಿದ್ದರು. ಈ ಹಿನ್ನಲೆ, ಪರಿಹಾರ ನೀಡಲು ತಹಶೀಲ್ದಾರ್ಗೆ ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ್ ಅವರು ಸೂಚನೆ ನೀಡಿದ್ದರು.
ಇಂದು ಸಂಸದ ಸಂಗಣ್ಣ ಕರಡಿ,ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಯಲಮಗೇರಿ ಗ್ರಾಮಕ್ಕೆ ತೆರಳಿ ಮೃತ ಮಕ್ಕಳ ತಂದೆ ಸೋಮಣ್ಣ ಅವರಿಗೆ 15 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿ,ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಈ ವೇಳೆ ಜಿ.ಪಂ.ಸದಸ್ಯ ರಾಮಣ್ಣ ಚೌಡ್ಕಿ, ಕೊಪ್ಪಳ ತಹಶೀಲ್ದಾರ್ ಜಿ.ಬಿ. ಮಜ್ಜಿಗೆ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 