ಶಿಕ್ಷಕರ ಸೇವೆ ಸಮಾಜದ ಭವಿಷ್ಯ ರೂಪಿಸುವ ಶಕ್ತಿ
The service of teachers is a force that shapes the future of society
ಬ್ಯಾಡಗಿ: ವಿದ್ಯಾರ್ಥಿಗಳಲ್ಲಿ ಜ್ಞಾನ, ಶಿಸ್ತು ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಕರು ತಮ್ಮ ವೃತ್ತಿಯನ್ನು ಕೇವಲ ಉದ್ಯೋಗವೆಂದು ಪರಿಗಣಿಸದೆ, ಸಮಾಜ ನಿರ್ಮಾಣದ ಜವಾಬ್ದಾರಿಯೆಂದು ಭಾವಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಉಪನಿರ್ದೇಶಕ ಡಾ. ಪುನೀತ್ ಸಿ.ಆರ್. ಹೇಳಿದರು. ಪಟ್ಟಣದ ಕದರಮಂಡಲಗಿ ರಸ್ತೆಯ ಶಿವಪುರ ಬಡಾವಣೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಬ್ಯಾಡಗಿ ತಾಲ್ಲೂಕು ಭಗೀರಥ ಉಪ್ಪಾರ ಸಮಾಜ ಸಂಘದ ವತಿಯಿಂದ ಆಯೋಜಿಸಿದ್ದ ಭಗೀರಥ ಉತ್ತಮ ಶಿಕ್ಷಕ-2026 ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರ ನಿಸ್ವಾರ್ಥ ಸೇವೆ ಮತ್ತು ಬದ್ಧತೆಯನ್ನು ಗುರುತಿಸಿ ಗೌರವಿಸುವುದು ಇತರ ಶಿಕ್ಷಕರಿಗೂ ಪ್ರೇರಣೆಯಾಗಲಿದೆ. ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ಅವರಲ್ಲಿ ಆತ್ಮವಿಶ್ವಾಸ ಮೂಡಿಸುವ ಮೂಲಕ ಭವಿಷ್ಯದ ಉತ್ತಮ ನಾಗರಿಕರನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಹಾಗೂ ಬೋಧನಾ ವಿಧಾನಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳ ಕಲಿಕೆಯನ್ನು ಪರಿಣಾಮಕಾರಿಗೊಳಿಸಬೇಕು ಎಂದು ಹೇಳಿದರು. ಪ್ರಶಸ್ತಿ ಪಡೆದ ಶಿಕ್ಷಕರು ಇನ್ನಷ್ಟು ಉತ್ಸಾಹದಿಂದ ಕಾರ್ಯನಿರ್ವಹಿಸಿ, ಇತರರಿಗೆ ಮಾದರಿಯಾಗಬೇಕು ಎಂದು ಕರೆ ನೀಡಿದರು.
ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ. ವಿದ್ಯಾರ್ಥಿಗಳಲ್ಲಿ ಜ್ಞಾನ, ಶಿಸ್ತು, ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಶಿಲ್ಪಿಗಳಾಗಿದ್ದಾರೆ. ತಾಲ್ಲೂಕಿನ ಭಗೀರಥ ಉಪ್ಪಾರ ಸಮಾಜ ಸಂಘವು ಶಿಕ್ಷಣ ಕ್ಷೇತ್ರಕ್ಕೆ ಅಮೂಲ್ಯ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಗುರುತಿಸಿ ಗೌರವಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಇಂತಹ ಪ್ರಶಸ್ತಿಗಳು ಶಿಕ್ಷಕರಿಗೆ ಮತ್ತಷ್ಟು ಪ್ರೇರಣೆ ನೀಡುವುದರ ಜೊತೆಗೆ ಕರ್ತವ್ಯವನ್ನು ಬದ್ಧತೆಯಿಂದ ನಿರ್ವಹಿಸಲು ಉತ್ತೇಜನ ನೀಡುತ್ತವೆ ಎಂದರು.
ಮಾಜಿ ಶಾಸಕ ಸುರೇಶಗೌಡ ಪಾಟೀಲ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಅಡಿಪಾಯ. ಪ್ರತಿಯೊಬ್ಬ ವಿದ್ಯಾರ್ಥಿಗೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಶಿಕ್ಷಕರು ಶ್ರಮಿಸಬೇಕು. ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ಅವರಲ್ಲಿ ಆತ್ಮವಿಶ್ವಾಸ ಮೂಡಿಸಿ ಉತ್ತಮ ಭವಿಷ್ಯ ರೂಪಿಸುವ ಕಾರ್ಯದಲ್ಲಿ ಶಿಕ್ಷಕರು ನಿರಂತರವಾಗಿ ತೊಡಗಿಸಿಕೊಳ್ಳಬೇಕು ಎಂದರು. ತಾಲ್ಲೂಕಿನ ಭಗೀರಥ ಉಪ್ಪಾರ ಸಮಾಜ ಸಂಘವು ರಾಜ್ಯದಲ್ಲಿಯೇ ವಿಶಿಷ್ಟವಾದ ಕಾರ್ಯವನ್ನು ಕೈಗೊಂಡು 23 ಶಿಕ್ಷಕರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಿರುವುದು ಶ್ಲಾಘನೀಯ ಎಂದು ಹೇಳಿದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 