ಸಚಿವ ಸಂಪುಟ ರಚನೆ ಸುಗಮವಾಗಿ ನಡೆಯಲಿದೆ:ಬಸವರಾಜಬೊಮ್ಮಾಯಿ
ನವದೆಹಲಿ,ಜು.30 ಸಚಿವ ಸಂಪುಟ ರಚನೆ ಸುಗಮವಾಗಿ ನಡೆಯಲಿದೆ ಎಂದು ಸಿಎಂ ಬಸವರಾಜಬೊಮ್ಮಾಯಿ ಹೇಳಿದ್ದಾರೆ.
ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿ ಪಕ್ಷದ ರಾಷ್ಟ್ರೀಯ ವರಿಷ್ಠರನ್ನು ಭೇಟಿ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿಯಾಗಿ ಅವರ ಸಲಹೆ ಪಡೆಯಲಾಗುವುದು. ಸಂಪುಟ ವಿಸ್ತರಣೆ ಆದ್ಯತೆ ಮೇಲೆ ನಡೆಯಲಿದೆ.
ಕೇರಳದಲ್ಲಿ ಕೊರೊನಾ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಮೈಸೂರು, ಕೊಡಗು ಜಿಲ್ಲಾಧಿಕಾರಿಗಳ ಜತೆ ಚರ್ಚೆ ನಡೆಸಿದ್ದು ಅಗತ್ಯ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ ಎಂದರು.