ತಾಳಿಕೋಟಿ

ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿಗಳು ರಾಜ್ಯಕ್ಕೆ ದ್ವಿತೀಯ

ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿಗಳು ರಾಜ್ಯಕ್ಕೆ ದ್ವಿತೀಯ

ತಾಳಿಕೋಟೆ: ತಾಲೂಕಿನ ಮೈಲೇಶ್ವರ ಗ್ರಾಮದ ಬ್ರಿಲಿಯಂಟ್ ಆಂಗ್ಲ ಮತ್ತು ಕನ್ನಡ ಮಾದ್ಯಮ ಪ್ರೌಢ ಶಾಲೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಆಂಗ್ಲ ಮಾಧ್ಯಮದಲ್ಲಿ ಶ್ರೇಯಸ್ ರಮೇಶ ಮದ್ದರಕಿ 625 ಕ್ಕೆ 624 (99.84ಅ) ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾನೆ. 

ಇದೇ ಪ್ರೌಢ ಶಾಲೆಯ ಅಬ್ದುಲ್ ತೆಗ್ಗಿನಮನಿ 625 ಕ್ಕೆ 619 (99.04ಅ) ಅಂಕಗಳನ್ನು ಪಡೆದು ಶಾಲೆಗೆ ದ್ವಿತೀಯ ಸ್ಥಾನ ಹಾಗೂ ಬಸನಗೌಡ ಕುಳೆಕುಮಟಗಿ 625 ಕ್ಕೆ 618 (98.88ಅ) ಅಂಕಗಳನ್ನು ಪಡೆದು ಶಾಲೆಗೆ ತೃತೀಯ ಸ್ಥಾನ ಹೊಂದಿದ್ದಾರೆ. ಒಟ್ಟು 101 ವಿದ್ಯಾರ್ಥಿಗಳಲ್ಲಿ 82 ವಿದ್ಯಾರ್ಥಿಗಳು ಶೇ. 90 ಕ್ಕಿಂತ ಹೆಚ್ಚು, 96 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಮತ್ತು 05 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕನ್ನಡ ವಿಷಯದಲ್ಲಿ 10 ವಿದ್ಯಾರ್ಥಿಗಳು 125 ಕ್ಕೆ 125, ಇಂಗ್ಲೀಷ ವಿಷಯದಲ್ಲಿ 23 ವಿದ್ಯಾರ್ಥಿಗಳು 100 ಕ್ಕೆ 100, ಹಿಂದಿ ವಿಷಯದಲ್ಲಿ 11 ವಿದ್ಯಾರ್ಥಿಗಳು 100 ಕ್ಕೆ 100, ಗಣಿತ ವಿಷಯದಲ್ಲಿ 10 ವಿದ್ಯಾರ್ಥಿಗಳು 100 ಕ್ಕೆ 100, ವಿಜ್ಞಾನ ವಿಷಯದಲ್ಲಿ 04 ವಿದ್ಯಾರ್ಥಿಗಳು 100 ಕ್ಕೆ 100 ಮತ್ತು 03 ವಿದ್ಯಾರ್ಥಿಗಳು ಸಮಾಜ ವಿಜ್ಞಾನ ವಿಷಯದಲ್ಲಿ 100 ಕ್ಕೆ 100 ಅಂಕಗಳನ್ನು ಪಡೆದಿದ್ದಾರೆ.  

ಬ್ರಿಲಿಯಂಟ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಕನ್ನಡ ಮಾಧ್ಯಮದ ಆದರ್ಶ ಶಾಂತಪ್ಪ ಬಿರಾದಾರ 625 ಕ್ಕೆ 620 (99.20ಅ) ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ, ಮಹ್ಮದ್‌ಯುಸುಫ್ ಅವಟಿ 616 (98.56ಅ) ಅಂಕಗಳನ್ನು ಪಡೆದು ಶಾಲೆಗೆ ದ್ವಿತೀಯ, ಮನುಜಾ ಹಡಪದ 625 ಕ್ಕೆ 615 (98.40ಅ) ಅಂಕಗಳನ್ನು ಪಡೆದು ಶಾಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ. ಒಟ್ಟು 78 ವಿದ್ಯಾರ್ಥಿಗಳಲ್ಲಿ 52 ವಿದ್ಯಾರ್ಥಿಗಳು ಶೇ. 90 ಕ್ಕಿಂತ ಹೆಚ್ಚು, 70 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 08 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕನ್ನಡ ವಿಷಯದಲ್ಲಿ 07 ವಿದ್ಯಾರ್ಥಿಗಳು 125 ಕ್ಕೆ 125, ಇಂಗ್ಲೀಷ ವಿಷಯದಲ್ಲಿ 05 ವಿದ್ಯಾರ್ಥಿ 100 ಕ್ಕೆ 100, ಹಿಂದಿ ವಿಷಯದಲ್ಲಿ 05 ವಿದ್ಯಾರ್ಥಿಗಳು 100 ಕ್ಕೆ 100, ಗಣಿತ ವಿಷಯದಲ್ಲಿ 02 ವಿದ್ಯಾರ್ಥಿಗಳು 100 ಕ್ಕೆ 100, ವಿಜ್ಞಾನ ವಿಷಯದಲ್ಲಿ 03 ವಿದ್ಯಾರ್ಥಿಗಳು 100 ಕ್ಕೆ 100 ಮತ್ತು 04 ವಿದ್ಯಾರ್ಥಿಗಳು ಸಮಾಜ ವಿಜ್ಞಾನ ವಿಷಯದಲ್ಲಿ 100 ಕ್ಕೆ 100 ಅಂಕಗಳನ್ನು ಪಡೆದಿದ್ದಾರೆ. 

 ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿ, ಶಾಲೆಯ ಮುಖ್ಯ ಗುರುಗಳು ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ. 


ಸುದ್ದಿ ಓದಿ