ಮೇ 5 ರಿಂದ 17 ವರೆಗೆ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ
ಸಮೀಕ್ಷೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಂದ ಚಾಲನೆ
ವಿಜಯಪುರ 05: ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಲು ಜಿಲ್ಲೆಯಾದ್ಯಂತ ಮೇ 5 ರಿಂದ 17ರವರೆಗೆ ನಡೆಯಲಿರುವ ಸಮೀಕ್ಷೆಗೆ ನಗರದ ರಾಣಿಬಗೀಚದ ಮತಗಟ್ಟೆ ಸಂಖ್ಯೆ122ರಲ್ಲಿ ಸೋಮವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರು ಜಂಟಿಯಾಗಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲೀಕ ಮಾನವರ ವಿಜಯಪುರ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ,ಸಮೀಕ್ಷೆದಾರರಾದ ಯಂಡಿಗೇರಿ ಸೇರಿದಂತೆ ಮಾಸ್ಟರ ಟ್ರೈನರ್ಗಳು ಮೇಲ್ವಿಚಾರಕರು ಉಪಸ್ಥಿತರಿದ್ದರು.