ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿದಾಗ ಮಾತ್ರ ಶಿಕ್ಷಕನ ಸೇವೆಗೆ ಸಾರ್ಥಕತೆ: ತಳವಾರ
ಸಿಂದಗಿ: ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವ ಶಿಕ್ಷಕರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ತಾಲೂಕಿನ ನಂದಗೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕಶಾಲೆ ಮುಖ್ಯಗುರು, ಶಿಕ್ಷಕ ಭೂಷಣ ಪ್ರಶಸ್ತಿ ಪುರಸ್ಕೃತರಾದ ಎಂ.ಜಿ. ತಳವಾರ ಹೇಳಿದರು.
ತಾಲೂಕಿನ ನಂದಗೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಏರಿ್ಡಸಿದ ಸನ್ಮಾನ ಸಮಾರಂಭ ಕಾರ್ಯಕ್ರದಲ್ಲಿ ಸನ್ಮಾನೋತ್ತರವಾಗಿ ಅವರು ಮಾತನಾಡಿದರು.
ಪಠ್ಯಪುಸ್ತಕದ ಮಾಹಿತಿಗಳನ್ನಷ್ಟೇ ಬೋಧನೆ ಮಾಡುವುದರಿಂದ ಉತ್ತಮ ಶಿಕ್ಷಕರಾಗಲು ಸಾಧ್ಯವಿಲ್ಲ. ಬದಲಾಗಿ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿದಾಗ ಮಾತ್ರ ಶಿಕ್ಷಕನ ಸೇವೆಗೆ ಸಾರ್ಥಕತೆ ಬರಲು ಸಾಧ್ಯ ಎಂದು ಹೇಳಿದರು.
ಸನ್ಮಾನೋತ್ತರವಾಗಿ ನಿವೃತ್ತ ಮುಖ್ಯಗುರು ಸಂಗಣ್ಣ ಚಳ್ಳಗಿ ಮಾತನಾಡಿ, ಪಠ್ಯೇತರ ಚಟುವಟಿಕೆಗಳ ಜೊತೆಗೆ ಮಾನವೀಯ ಮೌಲ್ಯಗಳನ್ನು ಬಿತ್ತುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಿದೆ ಎಂದು ಶಿಕ್ಷಕರಿಗೆ ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ನಿವೃತ್ತ ಮುಖ್ಯಗುರು ಸಂಗಣ್ಣ ಚಳ್ಳಗಿ ಅವರನ್ನು ಸನ್ಮಾನಿಸಿ ಬಿಳ್ಕೋಡಲಾಯಿತು. ನಂತರ ಶಿಕ್ಷಕ ಭೂಷಣ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಎಂ.ಜಿ. ತಳವಾರ, ಸಿರಿಗನ್ನಡ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಎಂ.ಆರ್. ದೋಣಿ ಅವರಿಗೆ ಸುಂಗಠಾಣ ವಲಯದ ಎಲ್ಲಾ ಮುಖ್ಯ ಗುರುಗಳು ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿಗಳು ಸನ್ಮಾನಿಸಿ ಗೌರವಿಸಿದರು. ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.