ವಿದ್ಯಾರ್ಥಿಗಳ ಮೇಲಿನ ಬಲಪ್ರಯೋಗ ಖಂಡನೀಯ
The use of force against students is condemnable
ತಾಳಿಕೋಟಿ 23 : ನೀಟ್ ಪರೀಕ್ಷೆಯಲ್ಲಾದ ಅಕ್ರಮ ಕುರಿತು ನಿರ್ಲಕ್ಷೆಯನ್ನು ತೋರಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ಮಂತರ್ನಲ್ಲಿ 20 ದಿನ ಉಪವಾಸ ಸತ್ಯಾಗ್ರಹದ ಬಳಿಕ ಆಯೋಜಿಸಿದ್ದ ಸಂಸತ್ ಚಲೋ ಪ್ರತಿಭಟನೆ ವೇಳೆ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ನಡೆಸಿರುವುದನ್ನು ದಲಿತ ವಿದ್ಯಾರ್ಥಿ ಪರಿಷತ್ ಉಗ್ರವಾಗಿ ಖಂಡಿಸುತ್ತದೆ ಎಂದು ಅಧ್ಯಕ್ಷ ಗುರುಪ್ರಸಾದ್ ಬಿ.ಜಿ.ತಿಳಿಸಿದ್ದಾರೆ. ಗುರುವಾರ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಾವಿರಾರು ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾಗ ಅವರ ಮೇಲೆ ಬಲಪ್ರಯೋಗ ನಡೆಸಿರುವುದು ಪ್ರಜಾಪ್ರಭುತ್ವದ ಹಕ್ಕುಗಳನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಮತ್ತು ಸಂವಿಧಾನದ ಪ್ರಶ್ನಿಸುವ ಹಕ್ಕನ್ನು ಕಿತ್ತಿಕೊಂಡಂತಿದೆ.
ನ್ಯಾಯಯುತವಾದ ಹಕ್ಕುಗಳ ರಕ್ಷಣೆಗಾಗಿ ವಿದ್ಯಾರ್ಥಿಗಳು ಹೋರಾಡುತ್ತಿರುವಾಗ ಅವರ ಧ್ವನಿಯನ್ನು ಹತ್ತಿಕ್ಕುವುದು ಸರಿಯಲ್ಲ ಅವರ ಭವಿಷ್ಯವನ್ನು ಕಟ್ಟುವುದು ಸರ್ಕಾರದ ಹೊಣೆಗಾರಿಕೆಯಾಗಿದೆ.ಕೇಂದ್ರ ಸರ್ಕಾರ ಕೂಡಲೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ರಾಜೀನಾಮೆ ಪಡೆಯಬೇಕು. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ನೀಡಬೇಕು. ನ್ಯಾಯಯುತವಾದ ಸಂವಾದದ ಮೂಲಕ ಸಮಸ್ಯೆ ಬಗೆಹರಿಸಲು ಮುಂದಾಗಬೇಕು. ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು, ಪರೀಕ್ಷಾ ವ್ಯವಸ್ಥೆಯ ಮೇಲಿನ ವಿದ್ಯಾರ್ಥಿಗಳ ವಿಶ್ವಾಸವನ್ನು ಮರುಸ್ಥಾಪಿಸುವ ಜವಾಬ್ದಾರಿ ಸರ್ಕಾರದ್ದೇ ಆಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 