ಮತ ಎಣಿಕೆ ಕಾರ್ಯವನ್ನು ಪಾರದರ್ಶಕ,ಸೂಕ್ಷ್ಮವಾಗಿ ನಿರ್ವಹಿಸಿ ಜಿಲ್ಲಾಧಿಕಾರಿ ಸಲಹೆ
ಹಾವೇರಿ: ಮತ ಎಣಿಕೆ ಕಾರ್ಯಕ್ರಮವನ್ನು ಅತ್ಯಂತ ಪಾರದರ್ಶಕವಾಗಿ ಹಾಗೂ ಸೂಕ್ಷ್ಮವಾಗಿ ನಿಭಾಯಿಸಿ ಎಂದು ಎಣಿಕೆ ಸಿಬ್ಬಂದಿ ಹಾಗೂ ಮೇಲ್ವಿಚಾರಕರಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೃಷ್ಣ ಬಾಜಪೇಯಿ ಅವರು ಸಲಹೆ ನೀಡಿದರು.
ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಎಣಿಕೆ ಸಿಬ್ಬಂದಿ, ಮೇಲ್ವಿಚಾರಕರು, ಸಹಾಯಕ ಚುನಾವಣಾಧಿಕಾರಿಗಳು ಹಾಗೂ ತಹಶೀಲ್ದಾರರುಗಳಿಗೆ ನಡೆದ ಮತ ಎಣಿಕೆ ಪ್ರಕ್ರಿಯೆ ತರಬೇತಿ ಶಿಬಿರ ಉದ್ದೇಶಿಸಿ ಅವರು ಮಾತನಾಡಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ ಕಾರ್ಯವನ್ನು ಯಶಸ್ವಿಯಾಗಿ ಮುಗಿಸಿದ್ದೀರಿ. ಮತ ಎಣಿಕೆ ಕಾರ್ಯವನ್ನು ಅತ್ಯಂತ ಯಶಸ್ವಿಯಾಗಿ ನಡೆಸಿ ಎಂದು ಹೇಳಿದರು. ಮತ ಎಣಿಕೆ ಕಾರ್ಯ ಅತ್ಯಂತ ಸೂಕ್ಷ್ಮವಾದದ್ದು ಹಾಗೂ ಸರಳವಾದದ್ದು. ಗರಿಷ್ಠ ಎಚ್ಚರದಿಂದ ಸೂಕ್ಷ್ಮವಾಗಿ ನಿಭಾಯಿಸಿ.ಎಣಿಕೆಯಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದರೆ ಕೂಡಲೇ ಸಹಾಯಕ ಚುನಾವಣಾಧಿಕಾರಿಗಳನ್ನು ಸಂಪಕರ್ಿಸಿ ಮಾಹಿತಿ ಪಡೆದುಕೊಳ್ಳಿ ಎಂದು ತಿಳಿಸಿದರು.
ಮತ ಎಣಿಕೆ ಪ್ರಕ್ರಿಯೆ ಹಾಗೂ ನಿಯಮಾವಳಿ ಕುರಿತಂತೆ ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ವಿವರವಾಗಿ ಮಾಹಿತಿ ನೀಡಿದರು. ಪ್ರತಿಯೊಂದು ಟೇಬಲ್ಗಳಲ್ಲೂ ಕಂಪ್ಯೂಟರ್ ಸಿಸ್ಟಂ, ಇಂಟರನೆಟ್ ಕನೆಕ್ಸನ್, ಸ್ಕ್ಯಾನರ್ ವ್ಯವಸ್ಥೆ ಇರುತ್ತದೆ . ಎಣಿಕೆಯ ಸಿದ್ಧತೆ, ದಾಖಲೀಕರಣ ಕುರಿತಂತೆ ವಹಿಸಬೇಕಾದ ಕ್ರಮಗಳು ಹಾಗೂ ಎಣಿಕೆ ಸಂದರ್ಭದಲ್ಲಿ ನಿಗಧಿತ ನಮೂನೆಗಳ ಭತರ್ಿ, ಮೇಲು ರುಜು ಪ್ರಕ್ರಿಯೆ ಕುರಿತಂತೆ ವಿವರವಾಗಿ ತರಬೇತಿ ನೀಡಿದರು. ಎಣಿಕೆ ಕಾರ್ಯಕ್ಕೆ ಯಾವ ಸಿಬ್ಬಂದಿ, ಯಾವ ಕೊಠಡಿಗೆ ತೆರಳುತ್ತಿರಿ ಎಂಬುದು ಎಣಿಕೆ ದಿನವಾದ ಮೇ 23 ರಂದು ಬೆಳಿಗ್ಗೆ ತಿಳಿಯಲಿದೆ. ಅಂದು ಬೆಳಿಗ್ಗೆ 7-30ರೊಳಗೆ ಎಣಿಕೆ ಕೇಂದ್ರಕ್ಕೆ ಆಗಮಿಸಿ ನಿಯೋಜಿತ ಕೊಠಡಿಗೆ ತೆರಳಿ ನಿಯಮಾನುಸಾರ ಕರ್ತವ್ಯ ನಿರ್ವಹಿಸಿ ಎಂದು ಸಲಹೆ ನೀಡಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 