ಮಹಿಳೆ ಕಾಣೆ
ಬಳ್ಳಾರಿ 21: ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ 30 ವರ್ಷದ ಲಕ್ಷ್ಮೀ ಎಂಬುವರು ಆ.20ರಿಂದ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ಮಹಿಳಾ ಪೊಲೀಸ್ ಠಾಣೆ ಪೊಲೀಸ್ ಸಬ್-ಇನ್ಸ್ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಣೆಯಾದ ಮಹಿಳೆಯ ಚಹರೆ ಗುರುತು: 5 ಅಡಿ ಎತ್ತರ, ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು, ಕೋಲು ಮುಖ ಬಲಗೈಯಲ್ಲಿ ಅಚ್ಚೆ ಗುರುತು ಇರುತ್ತದೆ. ಹಳದಿ ಬಣ್ಣದ ಸೀರೆ ಮತ್ತು ಕಪ್ಪು ಬಣ್ಣದ ಕುಪ್ಪಸ ಧರಿಸಿರುತ್ತಾರೆ. ಕನ್ನಡ, ತೆಲಗು ಭಾಷೆ ಮಾತನಾಡುತ್ತಾರೆ.
ಕಾಣೆಯಾದ ಮಹಿಳೆಯ ಸುಳಿವು ಸಿಕ್ಕಲ್ಲಿ ಮಹಿಳಾ ಪೊಲೀಸ್ ಠಾಣೆಗೆ ಸಂಪರ್ಕಿಸಲು ಕೋರಿದೆ.