ರಕ್ತದಾನಕ್ಕೆ ಯುವ ಸಮೂಹ ಮುಂದಾಗಬೇಕು
The youth should come forward to donate blood
ಲೋಕದರ್ಶನ ವರದಿ
ಹಾವೇರಿ 19 : ದೇಹದಲ್ಲಿಯೇ ಉತ್ಪಾದನೆಯಾಗುವ ರಕ್ತವನ್ನು ಮತ್ತೊಬ್ಬರ ಜೀವ ಉಳಿಸಲು ನೀಡುವ ರಕ್ತದಾನ ಕಾರ್ಯಕ್ಕೆ ಯುವ ಸಮೂಹ ಮುಂದಾಗಬೇಕು ಎಂದು ಸ್ವಾಮಿ ವಿವೇಕಾನಂದ ಸೇವಾ ಸಮಿತಿ ಅಧ್ಯಕ್ಷ ಕೆ.ಎಂ. ವಿಜಯಪುರ ಹೇಳಿದರು.
ಬಸವೇಶ್ವರ ನಗರದ ಸಿ ಬ್ಲಾಕ್ನಲ್ಲಿರುವ ಶ್ರೀ ಶಕ್ತಿಮಾತೆ ಚೌಡೇಶ್ವರಿ ದೇವಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ದೇವಸ್ಥಾನ ಲೋಕಾಪರ್ಣೆ ಕಾರ್ಯಕ್ರಮದ ಅಂಗವಾಗಿ ಸ್ವಾಮಿ ವಿವೇಕಾನಂದ ಸೇವಾ ಸಮಿತಿ, ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆ ಹಾವೇರಿ ಹಾಗೂ ಹುಬ್ಬಳ್ಳಿ ಕಿಮ್ಸ್ ಸಹಯೋಗದಲ್ಲಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಸೇವಾ ಸಮಿತಿ ಕಾರ್ಯದರ್ಶಿ ಬಸವರಾಜ ಕೋರಿ, ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾ ಗೌರವ ಕಾರ್ಯದರ್ಶಿ ನಿಂಗಪ್ಪ ಆರೇರ, ಜಿಲ್ಲಾ ಖಜಾಂಚಿ ಪ್ರಭು ಹಿಟ್ನಳ್ಳಿ, ಡಾ. ವಿ.ಎಚ್. ಪ್ರಭು, ಕೆ.ಸಿ. ಪಾವಲಿ, ಡಾ. ಎನ್. ಪೂಜಾರ, ಗುರುಪಾದಗೌಡ ಪಾಟೀಲ, ಬಸನಗೌಡ ಸಣ್ಣಿಂಗಮ್ಮನವರ, ಎಸ್.ಎಫ್. ಹಿರೇಮಠ, ವಿಜಯಕುಮಾರ ಕುಡ್ಲಪ್ಪನವರ, ಉಳಿವಪ್ಪ ಹಾಲಗಣ್ಣನವರ ಸೇರಿದಂತೆ ಕಿಮ್ಸ್ ರಕ್ತನಿಧಿ ಕೇಂದ್ರದ ಸಿಬ್ಬಂದಿ, ಗಣ್ಯರು, ಭಕ್ತರು ಹಾಗೂ ರಕ್ತದಾನಿಗಳು ಪಾಲ್ಗೊಂಡಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 