ಬೆಳಗಾವಿ

ರಾಮ ಮಂದಿರ ಹುಂಡಿ ಕಳ್ಳತನ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ

ರಾಮ ಮಂದಿರ ಹುಂಡಿ ಕಳ್ಳತನ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ

ಬೆಳಗಾವಿ: ಅಯೋಧ್ಯೆಯ ಶ್ರೀರಾಮ ಮಂದಿರದ ಹುಂಡಿಯ ಹಣವನ್ನು ಕಳ್ಳತನ ಮಾಡಿರುವ ಘಟನೆ ಅತ್ಯಂತ ದುರಂತದಾಯಕ ಹಾಗೂ ಆಘಾತಕಾರಿ ಎಂದು ಅಖಿಲ ಭಾರತ ವಿಶ್ವ ಹಿಂದೂ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಆಕ್ರೋಶ ವ್ಯಕ್ತಪಡಿಸಿದರು. ಸೋಮವಾರ ನಗರದ ಲಕ್ಷ್ಮೀ ಟೇಕಡಿಯಲ್ಲಿರುವ ಹುಕ್ಕೇರಿ ಹಿರೇಮಠ ಸಂಸ್ಥಾನದ ಸಭಾಂಗಣದಲ್ಲಿ ಆಯೋಜಿಸಿದ್ದ ಸಂತರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಈ ಪ್ರಕರಣದ ಕುರಿತು ಉತ್ತರ ಪ್ರದೇಶ ಸರ್ಕಾರ ಈಗಾಗಲೇ ಎಸ್‌ಐಟಿ  ರಚನೆ ಮಾಡಿದ್ದು, 8 ಜನರನ್ನು ಬಂಧಿಸಿ ತನಿಖೆ ನಡೆಸುತ್ತಿದೆ. ಆದರೆ, ಈ ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬರಿಗೂ ಕಾನೂನಿನಡಿ ಕಠಿಣ ಶಿಕ್ಷೆಯಾಗಬೇಕು ಎಂದು ಅವರು ಒತ್ತಾಯಿಸಿದರು. ಷಡ್ಯಂತ್ರದ ಆರೋಪ: ರಾಮ ಮಂದಿರದ ಕುರಿತು ಕೆಲ ವಿರೋಧಿಗಳು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಮಂದಿರದ ಪ್ರತಿಷ್ಠಾಪನೆಗೆ ಆಹ್ವಾನ ನೀಡಿದರೂ ಬಾರದವರು, ಈಗ ಮಂದಿರದ ವಿರುದ್ಧ ಮಾತನಾಡುತ್ತಿದ್ದಾರೆ.

ಚಿನ್ನ, ಬೆಳ್ಳಿ ಮೂರ್ತಿಗಳ ಕಳ್ಳತನವಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ, ಆದರೆ ಮಂದಿರದ ಟ್ರಸ್ಟ್‌ ಇದನ್ನು ಸಂಪೂರ್ಣವಾಗಿ ಅಲ್ಲಗಳೆದಿದೆ ಎಂದು ಸ್ಪಷ್ಟಪಡಿಸಿದರು. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಹಿಂದೂಗಳ ಭಾವನೆಗಳೊಂದಿಗೆ ಚೆಲ್ಲಾಟವಾಡಲಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.ಜನಸಂಖ್ಯೆ ನಿಯಂತ್ರಣ ಹಾಗೂ ಧಾರ್ಮಿಕ ಜಾಗೃತಿ: ದೇಶದ ಹಿತದೃಷ್ಟಿಯಿಂದ ಪ್ರತಿಯೊಂದು ಹಿಂದೂ ಕುಟುಂಬದಲ್ಲಿ ಕನಿಷ್ಠ ಮೂವರು ಮಕ್ಕಳು ಇರಬೇಕು ಎಂದು ಪ್ರತಿಪಾದಿಸಿದ ಪರಾಂಡೆ, "ಭಾರತೀಯ ಸೇನೆಯಲ್ಲಿ ಸಾವಿರಾರು ಹುದ್ದೆಗಳು ಖಾಲಿಯಿರಲಿವೆ. 

ಸುದ್ದಿ ಓದಿ