ಕನ್ನಡ ಸಾಹಿತ್ಯ ಪರಂಪರೆಯ ಅರಿವು ಮೂಡಿಸುವ ಅಗತ್ಯ ಇದೆ: ಬಂಡೆ
ಇಂಡಿ: ಕನ್ನಡ ಸಾಹಿತ್ಯ, ಸಂಸ್ಕೃತಿ, ಕಲೆ, ವಾಸ್ತುಶಿಲ್ಪ ಕಲೆಯ ಪ್ರತಿಯೊಂದು ವೈಶಿಷ್ಟ್ಯವನ್ನು ಪ್ರಸಾರ ಮಾಡುವ ಮೂಲಕ ಸಾರ್ವಜನಿಕರಲ್ಲಿ ಕನ್ನಡ ಸಾಹಿತ್ಯ ಪರಂಪರೆಯ ಅರಿವು ಮೂಡಿಸುವ ಅಗತ್ಯತೆ ಇದೆ ಎಂದು ಶಿಕ್ಷಕ, ಸಾಹಿತಿ ಸಂತೋಷ ಬಂಡೆ ಹೇಳಿದರು.
ಮಂಗಳವಾರ ಪಟ್ಟಣದ ಆರ್.ಎಂ. ಶಹಾ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಂಡ 67ನೇ ಕನ್ನಡ ರಾಜ್ಯೋತ್ಸವ ಕಾರ‌್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಮಾತನಾಡಿದರು.
ಕನ್ನಡವು ನಮ್ಮ ಬದುಕಿಗೆ ಪೂರಕ ಮತ್ತು ಪ್ರೇರಕ. ಅದು ನಮ್ಮ ಬುದ್ಧಿಶಕ್ತಿ ಮತ್ತು ವಿವೇಕವನ್ನು ವಿಸ್ತರಿಸಿದೆ. ಹೊಸ ತಲೆಮಾರಿನವರಲ್ಲಿ ಕನ್ನಡದ ಬಗ್ಗೆ ಅಭಿಮಾನ ಮೂಡಿಸುವಂತ ಕಾರ್ಯ ನಡೆಯಬೇಕು ಎಂದು ಹೇಳಿದರು.
ಮುಖ್ಯಗುರು ಪ್ರಕಾಶ ಪಾಟೀಲ ಮಾತನಾಡಿ, ಕನ್ನಡ ಭಾಷೆಯಲ್ಲಿ ತಂತ್ರಾಶಗಳನ್ನು ಅಭಿವೃದ್ಧಿಪಡಿಸಿ ಅಂತಾರಾಷ್ಟ್ರೀಯ ಭಾಷೆಯನ್ನಾಗಿ ಪರಿವರ್ತಿಸಬೇಕಿದೆ. ಕನ್ನಡ ಭಾಷೆಯನ್ನು ಇನ್ನೂ ಹೆಚ್ಚಿನ ಮಟ್ಟದಲ್ಲಿ ಅಭಿವೃದ್ಧಿಗೊಳಿಸಬೇಕು. ಕನ್ನಡದ ದೀಪ ಬೆಳಗಿಸುವ ಕಾರ‌್ಯವನ್ನು ಪ್ರತಿಯೊಬ್ಬ ಕನ್ನಡಿಗ ಮಾಡಬೇಕು ಎಂದು ಹೇಳಿದರು.
ಕಾಲೇಜಿನ ಪ್ರಾಚಾರ್ಯೆ ಪರವೀನ ಜಮಾದಾರ ಉಪಸ್ಥಿತರಿದ್ದರು, ಶಿಕ್ಷಕಿ ಸವಿತಾ ಕೆ, ಮಾತನಾಡಿದರು.
ಕನ್ನಡ ವಿಭಾಗದ ಮುಖ್ಯಸ್ಥ ಅಲ್ಲಾಬಕ್ಷ ಉಕ್ಕಲಿ, ದತ್ತಾತ್ರೇಯ ಕೋಳಾರಿ ಸೇರಿದಂತೆ ಶಿಕ್ಷಕ, ಶಿಕ್ಷಕಿಯರು ಸಿಬ್ಬಂದಿಗಳು ಹಾಗೂ ಸ್ಕೌಟ್ಸ್, ಗೈಡ್ಸ್ ಮಕ್ಕಳು ಇದ್ದರು.
ಕುಮಾರಿ ಅಕ್ಷತಾ ಮತ್ತು ವಿಕಾಸ ನಡುಗಡ್ಡಿ ನಿರೂಪಿಸಿದರು.
ನಂತರ ಮಕ್ಕಳ ಸಾಂಸ್ಕೃತಿಕ ಕಾರ‌್ಯಕ್ರಮ ನಡೆಯಿತು.