ಕಾಲಮಿತಿಯೊಳಗೆ ಪೂರ್ಣಗೊಳ್ಳದ ಕಾಮಗಾರಿಗೆ ಅನುದಾನ ಇಲ್ಲ
ಕೊಪ್ಪಳ 11: 2017-18ನೇ ಸಾಲಿನ ಕಾಮಗಾರಿಗಳನ್ನು ಪೂರ್ಣಗೊಳಿಸಲು ಡಿಸೆಂಬರ್-2019ರ ಅಂತ್ಯದವರೆಗೆ ಕಾಲಮಿತಿಯನ್ನು ನಿಗದಿ ಪಡಿಸಲಾಗಿತ್ತು. ಆದರೆ ಇದುವರೆಗೂ ಬಹುತೇಕ ಕಾಮಗಾರಿಗಳು ಅಪೂರ್ಣವಾಗಿವೆ. ಇಂತಹ ಕಾಮಗಾರಿಗಳಿಗೆ ಡಿಸೆಂಬರ್ ಅಂತ್ಯದವರೆಗಿನ ಪ್ರಗತಿಗೆ ಸಂಬಂಧಿಸಿದ ಅನುದಾನವನ್ನು ಮಾತ್ರ ಬಿಡುಗಡೆ ಮಾಡಲಾಗುವುದು ಎಂದು ಕೆಆರ್ಐಡಿಎಲ್ ಅಧಿಕಾರಿಗಳಿಗೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ ಹೇಳಿದರು.
ಜಿಲ್ಲಾ ಪಂಚಾಯತನ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಲ್ಯಾಣ ಕನರ್ಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಮುಖ ಅನುಷ್ಠಾನ ಏಜೆನ್ಸಿಯಾದ ಕೆಆರ್ಐಡಿಎಲ್ಗೆ ನೀಡಿದ 2016-17, 2017-18 ಸಾಲಿನ ಕಾಮಗಾರಿಗಳನ್ನು ಇದುವರೆಗೂ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಈ ಸಾಲಿನ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಂತಿಮವಾಗಿ ಡಿಸೆಂಬರ್-2019 ವರೆಗೆ ಕಾಲಮಿತಿ ನಿಗದಿ ಪಡಿಸಿದೆ. ಅಷ್ಟರಲ್ಲಿ ಕಾಮಗಾರಿ ಪೂರ್ಣಗೊಳ್ಳದಿದ್ದರೆ ಆ ಅವಧಿಯವರೆಗಿನ ಕಾಮಗಾರಿ ವೆಚ್ಚವನ್ನು ಮಾತ್ರ ಮಂಡಳಿಯಿಂದ ಬಿಡುಗಡೆ ಮಾಡಲಾಗುವುದು. ಬಾಕಿ ಅನುದಾನವನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ. ಹಾಗೂ ಬಾಕಿ ಉಳಿದ ಕಾಮಗಾರಿಗೆ ಸಂಬಂಧಿಸಿದ ಅನುಷ್ಠಾನ ಏಜೆನ್ಸಿಯನ್ನೇ ನೇರ ಹೊಣೆ ಮಾಡಲಾಗುವುದು ಎಂದು ಅವರು ಹೇಳಿದರು.
ಕೆಆರ್ಐಡಿಎಲ್ ಮಾತ್ರವಲ್ಲದೆ ಇತರ ಅನುಷ್ಠಾನ ಏಜೆನ್ಸಿಗಳಾದ ಲೋಕೋಪಯೋಗಿ ಇಲಾಖೆ, ಪಂ.ರಾ.ಇಂ. ವಿಭಾಗ, ನಿಮರ್ಿತಿ ಕೇಂದ್ರಗಳಿಗೆ ಸಂಬಂಧಿಸಿದ 2017-18 ಮತ್ತು 2018-19 ನೇ ಸಾಲಿನ ಕಾಮಗಾರಿಗಳನ್ನು ಕಡ್ಡಾಯವಾಗಿ ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳಿಸಬೇಕು. ವಿಶೇಷ ಕಾಮಗಾರಿ ಪ್ರಕರಣಗಳಿಗೆ ಮಾತ್ರ ಕಾಲಮಿತಿ ವಿಸ್ತರಣೆಗೆ ಅವಕಾಶವಿದ್ದು, ಅವುಗಳಿಗೆ ಸೂಕ್ತ ಕಾರಣಗಳೊಂದಿಗೆ ದಾಖಲೆಗಳನ್ನು ಒದಗಿಸಬೇಕು ಎಂದು ಅವರು ಹೇಳಿದರು.
ಮಂಡಳಿಯ ನಿಯಮದ ಪ್ರಕಾರ ರೂ. 30 ಲಕ್ಷದವರೆಗಿನ ಕಾಮಗಾರಿಯನ್ನು 3 ತಿಂಗಳುಗಳೊಳಗೆ, ರೂ. 30ಲಕ್ಷದಿಂದ 01ಕೋಟಿಯವರೆಗಿನ ಕಾಮಗಾರಿಗೆ 5 ತಿಂಗಳುಗಳೊಳಗೆ ಹಾಗೂ ರೂ. 01 ಕೋಟಿ ಹಾಗೂ ಮೇಲ್ಪಟ್ಟ ಕಾಮಗಾರಿಗಳನ್ನು 06 ತಿಂಗಳುಗಳೊಳಗೆ ಪ್ರಾರಂಭಿಸಬೇಕು. ಕಾಮಗಾರಿ ಬದಲಾವಣೆ ಅಥವಾ ಅನುಷ್ಠಾನ ಏಜೆನ್ಸಿಯ ಬದಲಾವಣೆಯ ಅಗತ್ಯವಿದ್ದಲ್ಲಿ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ದೊರೆತ ಒಂದು ತಿಂಗಳೊಳಗಾಗಿ ಪ್ರಸ್ತಾವನೆ ಸಲ್ಲಿಸಬೇಕು. ಆದರೆ ಆಡಳಿತಾತ್ಮಕ ಅನುಮೋದನೆ ದೊರೆತ ವರ್ಷಗಳ ನಂತರವೂ ಬಹುತೇಕ ಕಾಮಗಾರಿಗಳು ಇನ್ನೂ ಆರಂಭವಾಗಿಲ್ಲ. ಇದು ಅಧಿಕಾರಿಗಳ ನಿರ್ಲಕ್ಷ್ಯತನವನ್ನು ತೋರಿಸುತ್ತದೆ. ಕೆಕೆಆರ್ಡಿಬಿ ಅಡಿ ಬರುವ ಆರು ಜಿಲ್ಲೆಗಳಲ್ಲಿ ಪ್ರಸಕ್ತ ವರ್ಷ ಕೊಪ್ಪಳ ಜಿಲ್ಲೆಯು ಆಥರ್ಿಕ ಸಾಧನೆ ಹಾಗೂ ಭೌತಿಕ ಸಾಧನೆಗಳಲ್ಲಿ ನಿರೀಕ್ಷಿತ ಪ್ರಗತಿಯನ್ನು ಸಾಧಿಸಿಲ್ಲ. ಈ ಸಂಗತಿಯು ಸಕರ್ಾರದ ಗಮನಕ್ಕೂ ಬಂದಿದ್ದು ಮುಂದಿನ ದಿನಗಳಲ್ಲಿ ಈ ಕುರಿತು ನಡೆಯುವ ಪ್ರಗತಿ ಪರಿಶೀಲನಾ ಸಭೆಗೆ ಎಲ್ಲ ಅನುಷ್ಠಾನ ಏಜೆನ್ಸಿಗಳ ಅಧಿಕಾರಿಗಳು ಹಾಜರಾಗಿ ವರದಿ ಸಲ್ಲಿಸಬೇಕು ಎಂದು ಅವರು ಸೂಚನೆ ನೀಡಿದರು.
ಮುಖ್ಯವಾಗಿ ಅಧಿಕಾರಿಗಳು ಕ್ರಿಯಾಶೀಲರಾಗಬೇಕು. ಸಕರ್ಾರದ ಕಾಮಗಾರಿಗಳು ಅಭಿವೃದ್ಧಿ ಉದ್ದೇಶವನ್ನು ಹೋಂದಿರುತ್ತವೆ ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಜವಾಬ್ದಾರಿಯನ್ನು ಹೊಂದಿರಬೇಕು. ನಿಮ್ಮ ಉಸ್ತುವಾರಿಯಲ್ಲಿ ನಡೆಯುವ ಕಾಮಗಾರಿಗಳ ಕುರಿತು ನಿಮಗೇ ಪೂರ್ಣ ಮಾಹಿತಿ ಇಲ್ಲವೆಂದರೆ ನೀವು ಮಾಡುತ್ತಿರುವ ಕೆಲಸವಾದರೂ ಏನು ಎಂದು ಅವರು ಅಧಿಕಾರಿಗಳಿಗೆ ಪ್ರಶ್ನಿಸಿದರು.
ಕೆಕೆಆರ್ಡಿಬಿ ಅನುದಾನದಡೆ ಜಿಲ್ಲೆಯ ವಿವಿಧೆಡೆ ನಿಮರ್ಾಣವಾಗುತ್ತಿರುವ ಬಸ್ನಿಲ್ದಾಣಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಬಸ್ ನಿಲ್ದಾಣವನ್ನು ಶೀಘ್ರ ಉದ್ಘಾಟಿಸಬೇಕು ಎಂದು ಎನ್.ಇ.ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಸತಿ ಶಾಲೆಗಳ ಕಟ್ಟಡ, ಗಂಗಾವತಿಯ ಪ್ರಥಮ ದರ್ಜ್ ಕಾಲೇಜು ಕಟ್ಟಡ ಕಾಮಗಾರಿ, ಜಿಲ್ಲೆಯ ವಿವಿಧೆಡೆ ಸ್ಥಾಪಿಸಬೇಕಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಕಾಮಗಾರಿ, ಮುಂತಾದವುಗಳ ಕುರಿತು ಪ್ರಗತಿ ವರದಿಯನ್ನು ಪರಿಶೀಲಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಜಿ.ಪಂ. ಸಿಇಒ ರಘುನಂದನ್ ಮೂರ್ತಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ನೇಹಾ ಜೈನ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಅನುಷ್ಠಾನ ಏಜೆನ್ಸಿಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 