ಬಸವೇಶ್ವರ ಏತ ನೀರಾವರಿ ಯೋಜನೆಗೆ ಅನುದಾನದ ಕೊರತೆ ಬರುವುದಿಲ್ಲ
ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಭರವಸೆ
ಕಾಗವಾಡ 29: ಕಾಗವಾಡ ಮತಕ್ಷೇತ್ರದ ಲಕ್ಷಾಂತರ ರೈತರ ಮಹತ್ವಕಾಂಕ್ಷಿ ಯೋಜನೆಯಾದ ಖಿಳೇಗಾವ ಬಸವೇಶ್ವರ ಏತ ನೀರಾವರಿ ಯೋಜನೆ ಪೂರ್ಣಗೊಳಿಸಲು ಯಾವುದೇ ಅನುದಾನದ ಕೊರತೆ ಬರುವುದಿಲ್ಲ ಎಂದು ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಬೆಂಗಳೂರಲ್ಲಿ ಕಾಗವಾಡ ಮತಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವ ಶ್ರೀಮಂತ ಪಾಟೀಲ ಅವರಿಗೆ ಭರವಸೆ ನೀಡಿದರು.
ಮಂಗಳವಾರ ದಿ. 29ರಂದು ಬೆಂಗಳೂರಿನಲ್ಲಿ ಕಾಗವಾಡ ಮತಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀಮಂತ ಪಾಟೀಲರು ಬಿಜೆಪಿ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿಗಳಾದ ಸಿಟಿ ರವಿ ಅವರನ್ನು ಭೇಟಿಯಾಗಿ ಇಲ್ಲಿಯ 22 ಗ್ರಾಮಗಳ ರೈತರು ಜಾತಕ ಪಕ್ಷಿಯಂತೆ ಕಾಯುತ್ತಿರುವ ಈ ಖಿಳೇಗಾವ ಬಸವೇಶ್ವರ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ ಅದರ ಮಾಹಿತಿಯನ್ನು ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರಿಗೆ ಶಾಸಕ ಶ್ರೀಮಂತ ಪಾಟೀಲ ಅವರು ತಿಳಿಸಿದರು.
ನಮ್ಮ ಕರ್ನಾಟಕ ಗಡಿ ಭಾಗದ ಪರಿಸರವನ್ನು ನಾನು ಕಂಡಿದ್ದೇನೆ ಅಲ್ಲಿ ನೀರಿನ ಸಮಸ್ಯೆ ಬಹಳಷ್ಟಿದ್ದು ಯಾವುದೇ ಕಾರಣಕ್ಕೂ ಈ ಯೋಜನೆಯನ್ನು ಪೂರ್ಣಗೊಳಿಸಲು ಸರ್ಕಾರದ ಗಮನಕ್ಕೆ ತರುತ್ತೇನೆ ಎಂದು ಸಿಟಿ ಭರವಸೆ ನೀಡಿದರು.