ಚಿಕ್ಕೋಡಿ

ಕಬ್ಬಿಗೆ 5 ಸಾವಿರ ದರ ಕೇಳುವುದರಲ್ಲಿ ತಪ್ಪಿಲ್ಲ: ಪ್ರಭಾಕರ ಕೋರೆ

ಕಬ್ಬಿಗೆ 5 ಸಾವಿರ ದರ ಕೇಳುವುದರಲ್ಲಿ ತಪ್ಪಿಲ್ಲ: ಪ್ರಭಾಕರ ಕೋರೆ
There is nothing wrong in demanding a price of ₹5,000 for sugarcane: Prabhakar Kore


ಚಿಕ್ಕೋಡಿ 24 : ಪ್ರತಿ ಟನ್ ಕಬ್ಬಿಗೆ 5 ಸಾವಿರ ದರ ಕೇಳುವುದರಲ್ಲಿ ತಪ್ಪಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಕ್ಕರೆ ಖರೀದಿ, ದಾಸ್ತಾನು ಹಾಗೂ ಮಾರಾಟಕ್ಕೆ ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸಿದೆ. ಸಕ್ಕರೆ ದರ ಹೆಚ್ಚಾದರೆ ಕಬ್ಬಿಗೆ ಹೆಚ್ಚಿನ ದರ ನೀಡಲು ಸಾಧ್ಯವಾಗಲಿದೆ ಎಂದು ಕೆಎಲ್‌ಇ ಸಂಸ್ಥೆಯ ಗೌರವಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು.  ನಗರದಲ್ಲಿ ಬುಧವಾರ ನಡೆದ ದಾದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯ 58ನೇ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.  

ಮೆಕ್ಕೆಜೋಳ, ಗೋಧಿ, ಭತ್ತ ಸೇರಿದಂತೆ ವಿವಿಧ ಬೆಳೆಗಳಿಗೆ ಸರ್ಕಾರ ನಿಯಂತ್ರಣ ವಿಧಿಸುತ್ತಿರುವುದರಿಂದ ಸಕ್ಕರೆ ಕಾರ್ಖಾನೆಗಳ ನಿರ್ವಹಣೆ ಕಷ್ಟವಾಗುತ್ತಿದೆ ಎಂದು ಅವರು ವಿಷಾದಿಸಿದರು. ರೈತರು ಕೃಷಿ ವೆಚ್ಚ ಕಡಿಮೆ ಮಾಡಿಕೊಂಡು ಹೆಚ್ಚು ಇಳುವರಿ ನೀಡುವ ಕಬ್ಬು ಬೆಳೆಯುವ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು. ಕೃಷಿಯಲ್ಲಿ ಅಗತ್ಯ ಬದಲಾವಣೆಗಳನ್ನು ಅಳವಡಿಸಿಕೊಂಡರೆ ರೈತರ ಆರ್ಥಿಕ ಸ್ಥಿತಿ ಸುಧಾರಿಸಲು ಸಾಧ್ಯ ಎಂದು ಸಲಹೆ ನೀಡಿದರು.  

ಕಾರ್ಖಾನೆ ಅಧ್ಯಕ್ಷ ಮಲ್ಲಿಕಾರ್ಜುನ ಕೋರೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಪಾಧ್ಯಕ್ಷ ತಾತ್ಯಾಸಾಹೇಬ ಕಾಟೆ, ನಿರ್ದೇಶಕರಾದ ಭರತೇಶ ಬನವಣೆ, ಅಜಿತ್ ದೇಸಾಯಿ, ಸಂದೀಪ ಪಾಟೀಲ, ಮಲ್ಲಪ್ಪ ಶೇಡಬಾಳೆ, ದಿನೇಶ ಪಾಟೀಲ, ಪರಸಗೌಡ ಪಾಟೀಲ, ಶಿವಪ್ರಸಾದ ಕೋರೆ, ಚೇತನ ಪಾಟೀಲ ಹಾಗೂ ವ್ಯವಸ್ಥಾಪಕ ನಿರ್ದೇಶಕ ಆರಿ​‍್ಬ. ಖಂಡಗಾವೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. 


ಸುದ್ದಿ ಓದಿ