ಬಳ್ಳಾರಿ

ರಾಜ್ಯ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಅಧ್ಯಕ್ಷರಾಗಿ ತಿಮ್ಮನಗೌಡ ಆಯ್ಕೆ

ರಾಜ್ಯ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಅಧ್ಯಕ್ಷರಾಗಿ ತಿಮ್ಮನಗೌಡ ಆಯ್ಕೆ



ಬಳ್ಳಾರಿ ,ಅ.25: ಕರ್ನಾಟಕ ರಾಜ್ಯ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ರಾಜ್ಯಾಧ್ಯಕ್ಷರಾಗಿ ಬಳ್ಳಾರಿ ಜಿಲ್ಲೆಯ ಸಿದ್ದಮ್ಮನಹಳ್ಳಿಯ ಹೆಚ್‌.ತಿಮ್ಮನಗೌಡ ಆಯ್ಕೆಯಾಗಿದ್ದಾರೆ.ನಗರದ ಕನಿಷ್ಕ ಹೋಟೆಲ್ನಲ್ಲಿ ಶನಿವಾರ ನಡೆದ ಸಂಘದ ರಾಜ್ಯಮಟ್ಟದ ಚುನಾವಣೆಯಲ್ಲಿ ತಿಮ್ಮನಗೌಡ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ಸಂಘಟನೆಯಲ್ಲಿ ಹಲವು ವರ್ಷಗಳಿಂದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ಸೇವೆ ಸಲ್ಲಿಸಿರುವ ಅವರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿರುವುದು ಬಳ್ಳಾರಿ ಜಿಲ್ಲೆಯ ಕೃಷಿ ಪರಿಕರಗಳ ಮಾರಾಟಗಾರರ ವಲಯದಲ್ಲಿ ಸಂತಸ ಮೂಡಿಸಿದೆ.ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಮಿತಿಯ ಅಧ್ಯಕ್ಷರಾಗಿರುವ ತಿಮ್ಮನಗೌಡ ಅವರು, ಈ ಹಿಂದೆ ಬಳ್ಳಾರಿ ಜಿಲ್ಲಾ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಜಿಲ್ಲಾಧ್ಯಕ್ಷರಾಗಿ ಹಾಗೂ ಕರ್ನಾಟಕ ರಾಜ್ಯ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ರಾಜ್ಯ ಖಜಾಂಚಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ಸಂಘದ ಬೆಳವಣಿಗೆಗೆ ಅವರು ಸಲ್ಲಿಸಿರುವ ಸೇವೆ ಹಾಗೂ ಸಂಘಟನಾತ್ಮಕ ಕಾರ್ಯಗಳನ್ನು ಪರಿಗಣಿಸಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಲಾಗಿದೆ.ಚುನಾವಣೆಯ ಬಳಿಕ ಸಂಘದ ಪದಾಧಿಕಾರಿಗಳು ನೂತನ ರಾಜ್ಯಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ಕಾರ್ಯಚಟುವಟಿಕೆಗಳಿಗೆ ಶುಭ ಹಾರೈಸಿದರು. ರಾಜ್ಯಮಟ್ಟದ ಜವಾಬ್ದಾರಿ ದೊರೆತಿರುವುದು ಬಳ್ಳಾರಿ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದ್ದು, ಸಂಘದ ಅಭಿವೃದ್ಧಿ ಹಾಗೂ ಮಾರಾಟಗಾರರ ಹಿತಾಸಕ್ತಿಗಳ ರಕ್ಷಣೆಗೆ ಹೊಸ ಹೊಣೆಗಾರಿಕೆ ನೆರವಾಗಲಿದೆ ಎಂಬ ನೀರೀಕ್ಷೆ ವ್ಯಕ್ತವಾಗಿದೆ.

ಈ ಸಂದರ್ಭದಲ್ಲಿ ಸಂಘದ ರಾಜ್ಯ ಗೌರವಾಧ್ಯಕ್ಷರಾದ ನಾಗರಾಜ ಲೋಕಿಕೆರೆ, ರಾಜು ತೋಟಪ್ಪನವರ, ಉಪಾಧ್ಯಕ್ಷರಾದ ಮಲ್ಲಿಕಾರ್ಜುನ, ಟಿ.ಎಂ. ಉಮಾಪತಯ್ಯ, ಜಿಎಸ್ ಮಹಾಬಲ ಕೊಪ್ಪ, ಸುಹಾಸ ಹಾವೇರಿ ಸೆಟ್ಟರ, ಬಸವರಾಜ ಮಲಂಗಲಗಿ, ಬಸವರಾಜ ಕೋರಿ, ನಾಗರಾಜ ಎಸ್, ಶಿವಣ್ಣ, ಸಿ ಆರ್ ಪಾಟೀಲ್, ಸಂತೋಷ್ ಕುಮಾರ್, ರಾಮಕೃಷ್ಣಯ್ಯ, , ನಿರಂಜನ ಶೆಟ್ಟಿ, ಸೇರಿದಂತೆ ಸಂಘದ ವಿವಿಧ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. 


ಸುದ್ದಿ ಓದಿ