ಸಚಿವ ಸ್ಥಾನಕ್ಕೆ ಬೇಡಿಕೆಯಿಟ್ಟ ಶಾಸಕ ತಿಪ್ಪಾರೆಡ್ಡಿ
ಬೆಂಗಳೂರು,ಜು.28 ನೂತನ ಸಚಿವ ಸಂಪುಟದಲ್ಲಿ ಚಿತ್ರದುರ್ಗಕ್ಕೆ ಆದ್ಯತೆ ನೀಡಿ ತಮಗೆ ಸಚಿವ ಸ್ಥಾನ ಸಿಗಲಿದೆ ಎಂಬ ವಿಶ್ವಾಸವನ್ನು ಚಿತ್ರದುರ್ಗ ಬಿಜೆಪಿ ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಮ್ಮ ನಾಯಕರನ್ನು ಭೇಟಿ ಮಾಡಲು ಬಂದಿದ್ದು,ಕಳೆದ ಬಾರಿ ನನಗೆ ಅವಕಾಶ ಕೊಟ್ಟಿಲ್ಲ.ನನಗೆ ಈ ಬಾರಿ ಅವಕಾಶ ಮಾಡಿಕೊಡುತ್ತಾರೆ ಎಂದುಕೊಂಡಿದ್ದೇನೆ.ಬೊಮ್ಮಯಿ ಸಂಪುಟದಲ್ಲಿ ಅವಕಾಶ ಸಿಗುತ್ತೆ ಎಂದುಕೊಂಡಿದ್ದೇನೆ.ಕೊಟ್ಟರೂ ಕೊಡದಿದ್ದರೂ ಕೆಲಸ ಮಾಡುತ್ತೇನೆ.
ವರಿಷ್ಠರ ಜೊತೆಗೆ ಮಾತಾಡಿದ್ದೇನೆ, ಸಚಿವ ಸ್ಥಾನದ ಬಗ್ಗೆ ಮಾತನಾಡಿಲ್ಲ
ನಾನು ತುಂಬಾ ಸಿನಿಯರ್ ಇದ್ದೇನೆ ನನ್ನನ್ನು ಪರಿಗಣಿಸಬೇಕು.ಮೈತ್ರಿ ಸರ್ಕಾರದಲ್ಲಿ, 20-20 ಸರ್ಕಾರದಲ್ಲಿ ಮತ್ತೆ ಯಡಿಯೂರಪ್ಪ ಸರ್ಕಾರದಲ್ಲಿ ಪದೇ ಪದೇ ಸಚಿವರನ್ನಾಗಿ ಮಾಡುತ್ತಿದ್ದಾರೆ.ಇದು ಸಮಾಧಾನ ಅಲ್ಲ , ಕೆಲವರನ್ನು ಬದಲಾವಣೆ ಮಾಡಿ ಹೊಸಬರಿಗೆ ಅವಕಾಶ ಕೊಡಬೇಕು.ಈ ರಾಜ್ಯದ ಮೂಲೆ ಮೂಲೆಗಳಲ್ಲಿ ಯಾವ ಸಮಸ್ಯೆಗಳು ಇದೆ ಎಂದು ಬೊಮ್ಮಯಿ ಅವರಿಗೆ ಗೊತ್ತಿದೆ. ಬೊಮ್ಮಯಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಅಭಿವೃದ್ಧಿಯಾಗಲಿ ಎಂದು ತಿಪ್ಪಾರೆಡ್ಡಿ ಹೇಳಿದರು.